ರಾಜಕೀಯ

ಈಶ್ವರಪ್ಪ ನಾಮಪತ್ರ ಹಿಂಪಡೆಯಲು ಡೆಡ್ ಲೈನ್ ನೀಡಿದ ಹೈಕಮಾಂಡ್..! ಬಿಜೆಪಿಯಿಂದ ಉಚ್ಛಾಟನೆಯ ಎಚ್ಚರಿಕೆ

ನ್ಯೂಸ್ ನಾಟೌಟ್ : ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ತಮ್ಮ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಇದೀಗ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತ್ತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಬಿವೈ ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಈಶ್ವರಪ್ಪರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪರ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ ನಂತರ ನಾನು ಶಿವಮೊಗ್ಗದಿಂದ ಸ್ಪರ್ಧಿಸೇ ತೀರುತ್ತೇನೆ ಎಂದು ಹಠ ತೊಟ್ಟಿದ್ದಾರೆ. ಇನ್ನು ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಅಲ್ಲದೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಪಕ್ಷದೊಳಗೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Related posts

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ​ಆಸ್ಪತ್ರೆಗೆ ದಾಖಲು..! ಭಾರತದ ಮೊದಲ ಮಹಿಳಾ ರಾಷ್ಟ್ರಪತಿಗೇನಾಯ್ತು..?

ಪ್ರಧಾನಿ ಮೋದಿ ಬಗ್ಗೆ ಪಿಎಚ್‌ಡಿ ಮಾಡಿದ ಮುಸ್ಲಿಂ ಮಹಿಳೆ ಯಾರು? 8 ವರ್ಷಗಳ ಹಿಂದೆಯೇ ಮೋದಿಯನ್ನು ವಿಷಯವಾಗಿ ಆಯ್ಕೆ ಮಾಡಿಕೊಂಡದ್ದೇಕೆ ಈಕೆ? ಏನಿದೆ ಸಂಶೋಧನಾ ಪ್ರಬಂಧದಲ್ಲಿ?

ರಾಹುಲ್‌ ಗಾಂಧಿಗೆ ಬಾಗಿಲು ಹಾಕಿ ಕೆನ್ನೆಗೆ ಬಾರಿಸ್ಬೇಕು, ಅವನೊಬ್ಬ ಹುಚ್ಚ ಎಂದಿದ್ದ ಭರತ್‌ ಶೆಟ್ಟಿ ವಿರುದ್ಧ ಎಫ್‌.ಐ.ಆರ್‌..! ವಿಚಾರಣೆಗೆ ಬರುವಂತೆ ಶಾಸಕನಿಗೆ ಪೊಲೀಸ್ ನೋಟಿಸ್‌..!