ಕ್ರೈಂ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

167
Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಎಸ್‌ವೈ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ಬಿಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಮೌಂಟ್ ಕಾರ್ಮೆಲ್​ ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. ಒಂದು ವರ್ಷದ ಹಿಂದೆ ವೈದ್ಯ ಡಾ. ನೀರಜ್‌ ಅವರನ್ನು ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ.

See also  ಏನಿದು ಅನಿಲ ಸೋರಿಕೆ..! 28 ಮಂದಿ ಆಸ್ಪತ್ರೆಗೆ ದಾಖಲು..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget