ಕರಾವಳಿ

ರಾಜ್ಯಾದ್ಯಂತ ಚಡ್ಡಿ ಸುಡುವೆ: ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

663

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸಲಾಗುತ್ತದೆ ಎನ್ನುವ ಎಚ್ಚರಿಕೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ.

ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮನೆ ಎದುರು ಪ್ರತಿಭಟನೆ ನಡೆಸಿದ ಎನ್ಎಸ್ ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಹಾಕುತ್ತಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ ಎನ್ ಎಸ್ ಯು ಐ ಸದಸ್ಯರು ಸಾಂಕೇತಿಕವಾಗಿ ಒಂದು ಚಡ್ಡಿ ಸುಟ್ಟಿದ್ದರು. ಅಷ್ಟೇ ಕಾರಣಕ್ಕೆ ಅವರ ಮೇಲೆ ಮನೆಗೆ ಬೆಂಕಿ ಹಚ್ಚಲು ಬಂ ದ ಆರೋಪ ಹೊರಿಸಿ ಬಂಧಿಸಲಾಗಿದೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಡವೇ ಕಾರಣ ಎಂದು ಕಿಡಿ ಕಾರಿದರು.

See also  ಸುಳ್ಯದ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ಸೆ. 21 ರಿಂದ ಸೆ. 30 ರವರೆಗೆ RDC-II ಮತ್ತು CATC ಶಿಬಿರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget