ಕರಾವಳಿ

ಮಗನಿಗಾಗಿ ಶಸ್ತ್ರ ತ್ಯಾಗ ಮಾಡಿದ ಮಾಜಿ ಸಿಎಂ

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಯಾಗುತ್ತೇವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅವರಿಗೆ ಕಿವಿಮಾತು ಹೇಳಲು ಇಚ್ಚಿಸುತ್ತೇನೆ. ನಿಮ್ಮ ಅಪ್ಪನ ಆಣೆ ನೀವು ಮುಖ್ಯಮಂತ್ರಿಯಾಗುವ ಪ್ರಶ್ನೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರೋಕ್ಷ ವಾಗ್ದಾಳಿ ನಡೆಸಿದರು.

ತಾಲ್ಲೂಕಿನ ಆಂಜನಾಪುರ ಗ್ರಾಮ ಸಮೀಪ ಶುಕ್ರವಾರ ನಡೆದ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷ ಸಂಘಟನೆಗೆ ರಾಜ್ಯದಲ್ಲಿ ಓಡಾಡುತ್ತೇನೆ. ರಾಜ್ಯದಲ್ಲಿ ನೂರಕ್ಕೆ ನೂರು ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರೇ ಮುಖ್ಯಮಂತ್ರಿಯಾಗುತ್ತಾರೆ ಈ ಬಗ್ಗೆ ಅನುಮಾನ ಬೇಡ ಎಂದರು.ಇದೇ ವೇಳೆ ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರನನ್ನು ಬಿಟ್ಟುಕೊಡುತ್ತಿದ್ದು ಮುಂದಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Related posts

ಅಡ್ಕಾರ್: ಬೈಕ್ ಗೆ ಹಿಂದಿನಿಂದ ಗುದ್ದಿದ ಜೀಪ್, ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

ಶಿಷ್ಟಾಚಾರ ಉಲ್ಲಂಘಿಸಿದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇಗುಲ ಸಿಬ್ಬಂದಿ ಅಮಾನತು! ಕಮಿಷನರ್ ಗೆ ದೂರು!

ಬಸ್ ನಲ್ಲಿ ಕಳೆದು ಹೋಯ್ತು ಮಹಿಳೆ ಮಾಂಗಲ್ಯ ಸರ,ಸರ ಹಿಂತಿರುಗಿಸಿದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು