ನ್ಯೂಸ್ ನಾಟೌಟ್: ರಾಜ್ಯದ ಮಾಜಿ ಶಿಕ್ಷಣ ಸಚಿವ ಎಂ ರಘುಪತಿ ನಿಧನರಾಗಿದ್ದಾರೆ. ಅವರು ಶನಿವಾರ ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತದೇಹವನ್ನು ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದೆ. ಹಿರಿಯ ಜನತಾ ಪರಿವಾರದ ನಾಯಕರಾಗಿದ್ದ ಅವರು ಮಲ್ಲೇಶ್ವರಂ ಹಾಗೂ ಶಿವಾಜಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಡೆ ಕಾಲದಲ್ಲಿ ಅವರು ಶಿಕ್ಷಣ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.