ಕ್ರೈಂವೈರಲ್ ನ್ಯೂಸ್

ಪರೀಕ್ಷಾ ಹಾಲ್‌ ಟಿಕೆಟ್‌ ತಿಂದ ಕುರಿ..! ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

160

ನ್ಯೂಸ್ ನಾಟೌಟ್: ಪರೀಕ್ಷೆ ಬರೆಯಲು ಶಾಲೆಯಿಂದ ನೀಡಲಾದ ಪ್ರವೇಶ ಪತ್ರ (ಹಾಲ್ ಟಿಕೆಟ್) ಕುರಿ ತಿಂದ ಕಾರಣ ಮನನೊಂದ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ(ಮಾ.25) ಸಂಜೆ ನಡೆದಿದೆ.

ಗೋಕುಳ ಗ್ರಾಮದ ನಿವಾಸಿ ಪೂಜಾ ಮಾರುತಿ ಮೇತ್ರೆ (14) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗ್ರಾಮದ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿನಿಯ ಪ್ರವೇಶ ಪತ್ರವನ್ನು ಸೋಮವಾರ ಕುರಿ ತಿಂದು ಹಾಕಿತು. ಇದರಿಂದ ಆತಂಕಗೊಂಡು, ಮನನೊಂದ ಈಕೆ ಶಾಲೆಯ ಮುಖ್ಯ ಗುರುಗಳ ಹೆಸರಿನಲ್ಲಿ ಒಂದು ಪತ್ರ ಬರೆದಿದ್ದು, ʼನನ್ನ ಪರೀಕ್ಷೆ ಪ್ರವೇಶ ಪತ್ರ ಕಳೆದ ಕಾರಣ ನನಗೆ ಶಾಲೆಗೆ ಬರಲು ಆಗಲ್ಲ. ನಾನು ಸತ್ತು ಹೋಗುತ್ತಿದ್ದೆನೆ. ನನ್ನನ್ನು ಕ್ಷಮಿಸಿ ಬಿಡಿʼ ಎಂದು ವಿವರಿಸಿದ್ದಾಳೆ.

ಶಿಕ್ಷಕರ ಹೆಸರಿಗೆ ಈಕೆ ಬರೆದ ಪತ್ರವನ್ನು ತನ್ನ ಅಣ್ಣನ ಕೈಗೆ ನೀಡಿದ ಇವಳು ಸಂಜೆ 7 ಗಂಟೆ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದಾಳೆ. ಈಕೆ ನಾಪತ್ತೆಯಾಗಿರುವುದನ್ನು ಗಮನಿಸಿದ ಸ್ಥಳೀಯರು ಗ್ರಾಮದ ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ರಾತ್ರಿ 11.30ರ ಸುಮಾರಿಗೆ ಈಕೆ ತನ್ನ ಸಂಬಂಧಿಕರ ಜಮೀನಿನ ಬಾವಿಯ ಒಳಗೆ ಅಳುತ್ತಿರುವುದು ಗಮನಿಸಿ ತಕ್ಷಣ ಬಾವಿಯಿಂದ ಮೇಲೆ ತೆಗೆದು ರಕ್ಷಣೆ ಮಾಡಿದ್ದಾರೆ. ಸುಮಾರು 30 ಅಡಿಗಳಷ್ಟು ಆಳವಾಗಿರುವ ಬಾವಿಯಲ್ಲಿ ನೀರು ಕಡಿಮೆ ಇರುವ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ ಎಂದು ವರದಿ ತಿಳಿಸಿದೆ.

See also  ರಸ್ತೆ ಮಧ್ಯೆ ಹೊತ್ತಿ-ಉರಿದ ಕಾರು..! 1 ಗಂಟೆಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಸಂಚಾರ ಸ್ಥಗಿತ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget