ಮಂಗಳೂರು: ಮಾಜಿ ಶಾಸಕ ಬಿಎಂ ಇದಿನಬ್ಬ ಅವರ ಮಗ ಬಿಎಂ ಭಾಷಾ ಉಗ್ರರೊಂದಿಗೆ ನಂಟು ಹೊಂದಿದ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಮನೆಗೆ ಬೆಂಗಳೂರಿನಿಂದ ಬಂದ ಎನ್‌ಐಎ ಅಧಿಕಾರಿಗಳ ತಂಡ ಬುಧವಾರ ಬೆಳಗ್ಗೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಸಿರಿಯಾ ಮೂಲದ ಐಸಿಸ್ ಉಗ್ರರ ಜತೆ ನಂಟು ಹೊಂದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಈಗಷ್ಟೇ ತನಿಖೆ ಶುರುವಾಗಿದ್ದು ಮತ್ತಷ್ಟು ಮಾಹಿತಿಗಳು ಹೊರಬೀಳುವ ನಿರೀಕ್ಷೆ ಇದೆ.