ನ್ಯೂಸ್ ನಾಟೌಟ್ : ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ (IIT Baba) ಹೇಳಿದ್ದ ಭಾರತ- ಪಾಕಿಸ್ತಾನ ಪಂದ್ಯದ ಫಲಿತಾಂಶ ಇದೀಗ ಉಲ್ಟಾ ಆಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತವನ್ನು (Team India) ಸೋಲಿಸಲಿದೆ. ಇದೇ ನಿಜ ಎಂದು ಅವರು ಹೇಳಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು. ಆದರೀಗ ಅವರ ಭವಿಷ್ಯವಾಣಿ ಸಂಪೂರ್ಣ ಸುಳ್ಳಾಗಿದೆ.
ಹೀಗಾಗಿ ಮತ್ತೆ ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿದ್ದಾರೆ. ಈ ಬಳಿಕ ಐಐಟಿ ಬಾಬಾ ಬಗ್ಗೆ ಹಿಮಾಚಲದಲ್ಲಿ ಶೇ.100, ಹರಿಯಾಣದಲ್ಲಿ ಶೇ.73 ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 71 ರಷ್ಟು ಅವರ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಆಗಿದೆ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ(ಫೆ.23) ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 6 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿದೆ.. ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದ ರಮ್ ಮಿಷಿನ್ ವಿರಾಟ್ ಕೊಹ್ಲಿ ಅವರು ಶತಕ ಬಾರಿಸುವ ಮೂಲಕ ಮತ್ತೊಮ್ಮೆ ತಮ್ಮ ಫಾರ್ಮ್ ಪ್ರದರ್ಶಿಸಿದ್ದಾರೆ. ಇದೀಗ ನೆಟ್ಟಿಗರು ಐಐಟಿ ಬಾಬಾ ನ ಭವಿಷ್ಯದ ಬಗ್ಗೆ ಅಪಹಾಸ್ಯ ಮಾಡಲು ಪ್ರಾರಂಭಿಸಿದ್ದಾರೆ.
Agar IIT Baba ka tukka laag gya tou kuch log inhe apna bagwan bna lenge 😂 pic.twitter.com/sZPzRxsICe
— Mr. Neeraj (@NeerajS00964849) February 21, 2025
ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ಐಐಟಿ ಬಾಬಾ ಅವರನ್ನು ಭಾರತ vs ಪಾಕಿಸ್ತಾನ ಪಂದ್ಯದ ಫಲಿತಾಂಶಧ ಬಗ್ಗೆ ಪ್ರಶ್ನಿಸಿದಾಗ ಈ ಬಾರಿ ಭಾರತ ಗೆಲ್ಲುವುದಿಲ್ಲ, ಪಾಕಿಸ್ತಾನವೇ ಗೆಲ್ಲುತ್ತದೆ ಎಂದು ತಿಳಿಸಿದ್ದರು. ಈ ಬಗ್ಗೆ ಇತ್ತೀಚೆಗೆ ಮತ್ತೆ ಪ್ರಶ್ನಿಸಿದಾಗಲೂ ನಾನು ನಿಮಗೆ ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಈ ಬಾರಿ ಗೆಲ್ಲುವುದಿಲ್ಲ ಎಂದು. ಭಾರತೀಯ ಕ್ರಿಕೆಟ್ ಆಭಿಮಾನಿಗಳಿಗೆ ಈ ಹೇಳಿಕೆಯಿಂದ ಅಕ್ಷರಶಃ ಆಘಾತ ಆಗಿತ್ತು. ಏಕೆಂದರೆ 2024ರ ಟಿ20 ವಿಶ್ವಕಪ್ ವೇಳೆ ಅವರು ಹೇಳಿದ್ದ ಭವಿಷ್ಯವಾಣಿ ನಿಜವಾಗಿತ್ತು. ಹೀಗಾಗಿಯೇ ಅವರು ಈ ಬಾರಿಯೂ ಹೇಳಿದ ಭವಿಷ್ಯವಾಣಿ ನಿಜವಾಗಲಿದೆ ಎಂದು ಅನೇಕರು ನಂಬಿದ್ದರು.ಆದರೆ, ಭವಿಷ್ಯಕ್ಕೆ ಸುಳ್ಳಾಗಿದ್ದು, ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ.