ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟರ್ ಕೆ.ಎಲ್‌.ರಾಹುಲ್‌ ಭೇಟಿ

ನ್ಯೂಸ್‌ ನಾಟೌಟ್‌ : ಭಾರತ ಕ್ರಿಕೆಟ್‌ ತಂಡದ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್‌ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಮಧ್ಯಾಹ್ನ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಕೆ.ಎಲ್‌.ರಾಹುಲ್ ಅವರು ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಬಳಿಕ ಮಹಾ ಪೂಜೆ ವೀಕ್ಷಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ನಂತರ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಕೆ.ಎಲ್‌.ರಾಹುಲ್‌ ಅವರನ್ನು ಗೌರವಿಸಲಾಯಿತು. ಸ್ನೇಹಿತರ ಜೊತೆಗೆ ಕೆ.ಎಲ್.ರಾಹುಲ್ ಕುಕ್ಕೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿಗಳು ಅವರನ್ನು ಸ್ವಾಗತಿಸಿ, ಸನ್ಮಾನಿಸಿದರು. ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.

Related posts

ಸಂಪಾಜೆ: ರಾಷ್ಟ್ರೀಯ ಹೆದ್ದಾರಿಗೆ ಉರುಳಿದ ಬೃಹತ್ ಮರ, ವಾಹನ ಸಂಚಾರ ಅಸ್ತವ್ಯಸ್ತ

ಬಸ್ಸಿಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳಿಗೆ ‘ಯಮ’ನಾದ ಖಾಸಗಿ ಬಸ್! 15ರ ವಿದ್ಯಾರ್ಥಿನಿಯ ದುರಂತ ಅಂತ್ಯ..!

ಕರಾವಳಿಯ ಮೂವರು ನಾಯಕರು ಬೆಳ್ಳಾರೆಯಲ್ಲಿ ಲಾಕ್‌..!