ಕ್ರೈಂರಾಜ್ಯಸಿನಿಮಾ

ಅಭಿಮಾನಿಗಳು ಮತ್ತು ಅರಣ್ಯ ಇಲಾಖೆ ಜಟಾಪಟಿ ಮಧ್ಯೆ ಆತನ ಕಳ್ಳಾಟ..! ಅರ್ಜುನ ಆನೆ ಸ್ಮಾರಕಕ್ಕೆ ದರ್ಶನ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ಸಂಗ್ರಹಿಸಿದ ವ್ಯಕ್ತಿ..!

237

ನ್ಯೂಸ್‌ ನಾಟೌಟ್‌: ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ನೆನಪಿಗೆ ಸ್ಮಾಎಕ ನಿರ್ಮಾಣ ವಿಷಯದಲ್ಲಿ ದರ್ಶನ್ ಅಭಿಮಾನಿಗಳು ಅನೇಕ ಸಾಮಗ್ರಿಗಳನ್ನು ತಂದು ಹಾಕಿದ್ದರು. ಕೆಲಸ ಆರಂಭಕ್ಕೂ ಮೊದಲು ಅರಣ್ಯ ಇಲಾಖೆ ತಕರಾರು ತೆಗೆದು ನಿಮ್ಮ ಹಣ ವಾಪಾಸ್ ನೀಡುತ್ತೇವೆ ಇನ್ನು ಅರಣ್ಯ ಇಲಾಖೆ ವತಿಯಿಂದಲೇ ಸ್ಮಾರಕ ನಿರ್ಮಿಸಲಾಗುವುದು ಎಂದು ಜಟಾಪಟಿ ನಡೆದಿತ್ತು.

ಈ ಮಧ್ಯೆ ಸ್ಮಾರಕ ನಿರ್ಮಾಣಕ್ಕೂ ಮೊದಲೇ ಲಕ್ಷಾಂತರ ರೂಪಾಯಿ ಹಣ ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದೆ. ಅರ್ಜುನನ ಸ್ಮಾರಕ ನಿರ್ಮಾಣ ಮಾಡೋದಕ್ಕೆಂದು ನಟ ದರ್ಶನ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಆಗುತ್ತಿದೆ ಎಂದು ಆರೋಪಿಸಲಾಗಿದೆ. ಮೈಸೂರು ಜಿಲ್ಲೆಯ ನವೀನ್ ಎಚ್‌ಎನ್ ಎಂಬಾತ ಅರ್ಜುನ ಪಡೆ ಎಂಬ ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿ ಲಕ್ಷಾಂತರ ರೂಪಾಯಿ ಹಣ ಸಂಗ್ರಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಹಲವರು ಹಣ ಸಹಾಯ ಮಾಡಿದ್ದಾರೆ. ಇದರಿಂದ ನವೀನ್​ ಹೆಚ್​​​ಎನ್​​ ಖಾತೆಗೆ ಲಕ್ಷಾಂತರ ಹಣ ಜಮೆ ಆಗಿದೆ ಎಂದು ಮಲೆನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಆರೋಪ ಮಾಡಿದ್ದಾರೆ. ಈತ ಹಣ ಸಂಗ್ರಹಿಸಿದ ಬಗ್ಗೆ ದೂರು ದಾಖಲಾಗಿದೆ. ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ಸಹಾಯ ಮಾಡುವಂತೆ ನವೀನ್​ ನಟ ದರ್ಶನ್ ಅವರ ಪಿಎಯನ್ನೂ ಸಂಪರ್ಕ ಮಾಡಿದ್ದಾನೆ. ಅವರಿಂದ ಕಲ್ಲನ್ನು ತೆರೆಸಿಕೊಂಡಿದ್ದಾನೆ. ಈ ಕಲ್ಲನ್ನು ಅರಣ್ಯ ಇಲಾಖೆಯವರಿಗೆ 30 ಸಾವಿರ ರೂ.ಗೆ ಮಾರಿದ್ದಾನೆ ಅಂತ ಆರೋಪ ಕೇಳಿಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Click 👇

https://newsnotout.com/2024/05/kannada-news-festival-of-ajja-in-uttara-kannada
https://newsnotout.com/2024/05/rajkot-fire-incident-and-couple-nomore
See also  ಕೊಡಗು: ಪ್ರವಾಸಿಗರಿಗೆ ನದಿ, ತೊರೆ, ಜಲಪಾತಗಳಿಗೆ ಇಳಿಯುವುದು, ಸ್ನಾನ ಮಾಡುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ..! ​ಮುಂದಿನ 3 ದಿನ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget