Latestಕ್ರೈಂಬೆಂಗಳೂರುರಾಜಕೀಯ

ಅಧಿಕೃತವಾಗಿ ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ..! ಕರ್ನಾಟಕ ವಿಧಾನಸಭೆಯ ಒಂದು ಸ್ಥಾನ ಖಾಲಿ..!

580

ನ್ಯೂಸ್ ನಾಟೌಟ್: ವಿಶೇಷ ಸಿಬಿಐ ನ್ಯಾಯಾಲಯವು ಪಕ್ಷೇತರ ಶಾಸಕ ಹಾಗೂ ಬಿಜೆಪಿ ಬೆಂಬಲಿತ ಜನಾರ್ದನ ರೆಡ್ಡಿಯನ್ನು ಅಕ್ರಮ ಗಣಿಗಾರಿಕೆಯಲ್ಲಿ ಅಪರಾಧಿ ಎಂದು 7 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿದ ಬೆನ್ನಲ್ಲೇ, ಸ್ಪೀಕರ್ ಯು.ಟಿ.ಖಾದರ್ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿದ್ದಾರೆ. 

ಈ ಸಂಬಂಧ ಗುರುವಾರ(ಮೇ.8) ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷೀ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಮೇ 6ರಂದು ಹೈದ್ರಾಬಾದ್‌ ನ ವಿಶೇಷ ಸಿಬಿಐ ನ್ಯಾಯಾಲಯವು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತೊಡಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತೀರ್ಪು ನೀಡಿದೆ. ಹೀಗಾಗಿ ಭಾರತ ಸಂವಿಧಾನದ 191(1)(ಇ) ವಿಧಿಯ ನಿಬಂಧನೆಗಳ ಪ್ರಕಾರ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯನ್ನು ಅನರ್ಹಗೊಳಿಸಲಾಗಿದೆ ಎಂದಿದ್ದಾರೆ.

ನ್ಯಾಯಾಲಯವು ಶಿಕ್ಷೆಯನ್ನು ತಡೆಹಿಡಿಯದ ಹೊರತು ಶಾಸಕ ಜನಾರ್ದನ ರೆಡ್ಡಿಯ ಅನರ್ಹತೆಯು ಮುಂದಿನ ಆರು ವರ್ಷಗಳ ಅವಧಿಯವರೆಗೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಪಾಕ್ ​ಗೆ ಸಲಾಲ್, ಬಾಗ್ಲಿಹಾರ್ ಅಣೆಕಟ್ಟಿನಿಂದ ದಿಢೀರ್ ನೀರು ಬಿಟ್ಟ ಭಾರತ..! ರಾತ್ರಿಯ ಪಾಕ್ ದಾಳಿ ವಿಫಲದ ಬೆನ್ನಲ್ಲೇ ಮತ್ತೊಂದು ಶಾಕ್..!

See also  ಮಂಡ್ಯ ರಾಜಕೀಯದಲ್ಲಿ ಸಂಚಲನ..! ಲೋಕಸಭಾ ಸ್ಪರ್ಧೆ ಕೈಬಿಟ್ಟ ಸಂಸದೆ ಸುಮಲತಾ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget