ನ್ಯೂಸ್ ನಾಟೌಟ್: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ತಂದೆ ಮತ್ತು ಮಗಳು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಮುರದಲ್ಲಿ (ಮೇ ೨೭) ನಡೆದಿದೆ.
ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಪುತ್ತೂರಿನಿಂದ ಕೆದಿಲ ಕಡೆಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಮುರ ಎಂಬಲ್ಲಿ ಕಾರು ಚಾಲಕ ಬಲಕ್ಕೆ ತೆಗೆದುಕೊಳ್ಳುವಾಗ ಕಾರಿನ ಹಿಂಬದಿಗೆ ಬಸ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಕರಿದ್ದು, ತಂದೆ ಹಾಗೂ ಮಗಳಿಗೆ ಗಂಭೀರ ಗಾಯಗಳಾಗಿವೆ. ಪವಾಡ ಸದೃಶ್ಯವಾಗಿ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರಿನ (Mangaluru) ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.