ಉಡುಪಿಕ್ರೈಂ

ಮಗಳ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ತಂದೆ..! ಪತಿಯ ಕೃತ್ಯಕ್ಕೆ ಪತ್ನಿ ಮಾಡಿದ್ದೇನು..?

ನ್ಯೂಸ್‌ ನಾಟೌಟ್‌: ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೇ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ವಾಟ್ಸಾಪ್‌ ಗ್ರೂಪ್‌ಗಳಿಗೆ ಹರಿಯಬಿಟ್ಟ ಪ್ರಕರಣ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಪತಿ ಕಂಚಿನಡ್ಕದ ನಿವಾಸಿ ಆಸೀಫ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಈ ನಡುವೆ ಆರೋಪಿಯ ಪುತ್ರಿ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಆಸೀಫ್‌ನ ಮಗಳು ಹಾಗೂ ತೀರ್ಥ ಹಳ್ಳಿಯ ಅವರ ಸಂಬಂಧಿ ತೌಸೀಫ್‌ ಎಂಬಾತನನ್ನು ಪ್ರೀತಿಸುತ್ತಿದ್ದರು. ಆದರೆ ಇದು ಆಸೀಫ್ ಗೆ ಇಷ್ಟವಿರಲಿಲ್ಲ. ಇದಕ್ಕಾಗಿ ಆರೋಪಿ ತೌಸೀಫ್‌ನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಆತ ಹಾಗೂ ತನ್ನ ಮಗಳ ಫೋನ್‌ ಕಸಿದುಕೊಂಡು ಅದರಲ್ಲಿದ್ದ ವಿಡಿಯೋಗಳನ್ನು ತನ್ನ ಫೋನ್‌ಗೆ ವರ್ಗಾಯಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್‌ ಗುಂಪುಗಳಿಗೆ ರವಾನಿಸಿ ವಿಕೃತಿ ಮೆರೆದಿದ್ದಾನೆ. ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಗ ಪತ್ನಿ ಮತ್ತು ಪುತ್ರಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಪತ್ನಿ ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Related posts

5 ವರ್ಷದ ಬಾಲಕಿ ಮೇಲೆ ತಂದೆ ಮತ್ತು ಚಿಕ್ಕಪ್ಪನಿಂದಲೇ ಅತ್ಯಾಚಾರ..! 84 ವರ್ಷ ಜೈಲು, 3 ಲಕ್ಷ ದಂಡ!

4 ತಿಂಗಳಿನಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ..! ಮಕ್ಕಳ ಕಲ್ಯಾಣ ಸಮಿತಿಯ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ ವಿದ್ಯಾರ್ಥಿನಿಯರು

ಈ ಬ್ಯಾಂಕ್ ಅನ್ನು ಮುಚ್ಚಲು ನಿರ್ಧರಿಸಿದೆಯಾ RBI..! ಬ್ಯಾಂಕ್ ಮುಚ್ಚಲು ಕಾರಣವೇನು? ನೀವೂ ಈ ಬ್ಯಾಂಕ್ ಗ್ರಾಹಕರಾ? ಗ್ರಾಹಕರಿಗೆ ಎಷ್ಟು ಲಕ್ಷದ ವರೆಗೆ ಪರಿಹಾರ ನೀಡಲಿದೆ ಈ ಬ್ಯಾಂಕ್?