Latestಕ್ರೈಂರಾಜ್ಯವೈರಲ್ ನ್ಯೂಸ್

ಕೆರೆಗೆ ಹಾರಿ ಪ್ರಾಣ ಕಳೆದುಕೊಂಡ ಅಪ್ಪ, ಅಮ್ಮ ಮತ್ತು ತಂಗಿ..! ಅಂತ್ಯಕ್ರಿಯೆಗೂ ಬಾರದ ಮಗಳು..!

1.1k

ನ್ಯೂಸ್ ನಾಟೌಟ್: ಮಗಳು ಮನೆ ಬಿಟ್ಟು ಓಡಿ ಹೋಗಿದ್ದಕ್ಕೆ ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿರೋ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಮೃತರು ಎಂದು ಗುರುತಿಸಲಾಗಿದೆ.

ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವನಕೊಂದಿಗೆ ಪ್ರೀತಿಯಲ್ಲಿ ಬಿದ್ದು ಹೇಳದೆ ಮನೆಬಿಟ್ಟು ಹೋಗಿದ್ದಳು. ಹೀಗಾಗಿ ಮಾನಕ್ಕೆ ಅಂಜಿ ಮೂವರು ಜೀವ ಕಳೆದುಕೊಂಡಿದ್ದಾರೆ. ಹೆಚ್​.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಮಳೆಯ ನಡುವೆಯೇ ಮೂವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಮೃತರನ್ನು ನೆನೆದು ಇಡೀ ಗ್ರಾಮಸ್ಥರು ಕಣ್ಣೀರಿಡುತ್ತಿದ್ದಾರೆ. ಅತ್ತ, ಮನೆ ಬಿಟ್ಟು ಹೋಗಿದ್ದ ಮಗಳು ಅಂತ್ಯಕ್ರಿಯೆಗೂ ಬಂದಿಲ್ಲ ಹೀಗಾಗಿ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.

ನಮ್ಮನ್ನ ಹುಳಬೇಡಿ, ಅಗ್ನಿ ಸ್ಪರ್ಶ ಮಾಡಿ. ನಮ್ಮ ಸಾವಿಗೆ ನಾವೇ ಕಾರಣ. ಬೆಳಗಿನ ಜಾವ 4 ಗಂಟೆಗೆ ನಿದ್ದೆ ಬರಲಾರದೆ ಒದ್ದಾಡಿ ಈ ಪತ್ರ ಬರೆದಿದ್ದೇವೆ. ಮಾನಕ್ಕೆ ಅಂಜಿ ಹೀಗೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ಮಗಳು ನಮಗೆಲ್ಲ ಮೋಸ ಮಾಡಿದಳು. ನಮ್ಮ ಪರಿಸ್ಥಿತಿ ಜಗತ್ತಿನಲ್ಲಿ ಯಾರಿಗೂ ಬರಬಾರದು. ನಮ್ಮ ಆಸ್ತಿ ಒಂದು ರೂಪಾಯಿಯೂ ಅವಳಿಗೆ ಸಿಗಬಾರದು. ಎಲ್ಲಾ ಆಸ್ತಿಯನ್ನ ಚಿಕ್ಕಪ್ಪನಿಗೆ ನೀಡಿ. ಮನೆ, ಸೈಟ್, ಮನೆಯಲ್ಲಿರುವ ಎರಡುವರೆ ಲಕ್ಷ ಹಣ ಯಾವುದು ಅವಳಿಗೆ ಸಿಗಬಾರದು. ಚಿಕ್ಕಪ್ಪನ ಹೆಂಡತಿ ಸೌಮ್ಯಗೂ ಸಿಗಬಾರದು ಅಂತ ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟು ಮೃತಪಟ್ಟಿದ್ದಾರೆ.

ಮನುಷ್ಯರನ್ನು ಕೊಂದು ಮೆದುಳು ತಿನ್ನುತ್ತಿದ್ದ ವಿಚಿತ್ರ ಕೊಲೆಗಾರನಿಗೆ ಜೀವಾವಧಿ ಶಿಕ್ಷೆ..! 14 ಜನರನ್ನು ಕೊಂದ ಆರೋಪ..!

See also  ಕುಂಭಮೇಳಕ್ಕೆ ಪತ್ನಿಯನ್ನು ಕರೆದೊಯ್ದು ಹತ್ಯೆ..! ಠಾಣೆಗೆ ಬಂದು ಕುಂಭಮೇಳದಲ್ಲಿ ಪತ್ನಿ ನಾಪತ್ತೆ ಎಂದು ದೂರು ನೀಡಿದ್ದ ಆಸಾಮಿ ಅರೆಸ್ಟ್..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget