ದೇಶ-ವಿದೇಶರಾಜಕೀಯವೈರಲ್ ನ್ಯೂಸ್

FBI ನಿರ್ದೇಶಕನಾಗಿ ಭಾರತೀಯ ಮೂಲದ ಕಶ್ಯಪ್‌ ನೇಮಕ, ಟ್ರಂಪ್ ಆಡಳಿತದಲ್ಲಿ ಭಾರತೀಯನಿಗೆ ಉನ್ನತ ಜವಾಬ್ದಾರಿ

235

ನ್ಯೂಸ್ ನಾಟೌಟ್: ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿ ಆಯ್ಕೆಯಾಗಿರುವ ಡೊನಾಲ್ಡ್‌ ಟ್ರಂಪ್‌ ಭಾರತ ಮೂಲದ ಕಶ್ಯಪ್ (ʻಕಶ್ʼ) ಪಟೇಲ್ ಅವರನ್ನ ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಶನ್ (FBI) ನಿರ್ದೇಶಕರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಈ ಮೂಲಕ ಟ್ರಂಪ್‌ ಸಂಪುಟಕ್ಕೆ ಆಯ್ಕೆಯಾದ ಭಾರತೀಯ ಮೂಲದ 2ನೇ ವ್ಯಕ್ತಿ ಎಂಬ ಹೆಗ್ಗಳಿಕೆ ಕಶ್ಯಪ್ ಪಾತ್ರರಾಗಿದ್ದಾರೆ.

ಈ ಮಾಹಿತಿಯನ್ನು ಟ್ರಂಪ್‌ ತಮ್ಮ ಸೋಶಿಯಲ್‌ ಮೀಡಿಯಾ ಪೋಸ್ಟ್‌ ನಲ್ಲಿ ಹಂಚಿಕೊಂಡಿದ್ದಾರೆ. ಭಾರತೀಯ ಮೂಲದ ಅಮೆರಿಕನ್‌ ಪ್ರಜೆ ಕಶ್‌, ನಮ್ಮ ಅಟಾರ್ನಿ ಜನರಲ್ ಪಾಮ್ ಬೊಂಡಿ ಅವರ ಅಡಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಅವರು ಎಫ್‌.ಬಿ.ಐ ಗೆ ಇನ್ನಷ್ಟು ಸಮಗ್ರತೆಯನ್ನು ತರಲಿದ್ದಾರೆ. ಕಶ್ ಪಟೇಲ್ ಅವರು ಫೆಡರಲ್ ಬ್ಯೂರೊ ಆಫ್ ಇನ್ವೆಸ್ಟಿಗೇಶನ್ನ ಮುಂದಿನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂಬುದನ್ನು ಪ್ರಕಟಿಸಲು ಹೆಮ್ಮೆ ಎನಿಸುತ್ತಿದೆ ಎಂದು ಹೇಳಿದ್ದಾರೆ.

ಕಾಶ್ ಒಬ್ಬ ಪ್ರತಿಭಾವಂತ ವಕೀಲ, ತನಿಖಾಧಿಕಾರಿ ಹಾಗೂ ಅಮೆರಿಕದ ಹೋರಾಟಗಾರ. ಭ್ರಷ್ಟಾಚಾರವನ್ನು ಬಯಲಿಗೆಳೆಯಲು, ನ್ಯಾಯವನ್ನು ರಕ್ಷಿಸಲು ಹಾಗೂ ಅಮೆರಿಕದ ಜನರ ಪರವಾಗಿ ತಮ್ಮ ಜೀವನ ಸವೆಸಿ ಸುದೀರ್ಘ ಹೋರಾಟ ನಡೆಸಿದ್ದಾರೆ ಎಂದು ಪೋಸ್ಟ್‌ ನಲ್ಲಿ ಟ್ರಂಪ್ ಬರೆದುಕೊಂಡಿದ್ದಾರೆ.

Click

https://newsnotout.com/2024/12/gold-mining-in-china-worlds-largest-news-issue/
https://newsnotout.com/2024/12/tamilnadu-cyclone-kannada-news-3-nomore-video/
https://newsnotout.com/2024/12/kaalabhairav-kannada-news-viral-cigarate-police-investigation/
See also  ಜನಪ್ರಿಯ ಪ್ರವಾಸಿ ತಾಣದಲ್ಲಿ ದೈತ್ಯ ಮರ ಉರುಳಿ ಬಿದ್ದು ಇಬ್ಬರು ಸಾವು..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget