ಬೆಂಗಳೂರುವೈರಲ್ ನ್ಯೂಸ್

ಫೆ.14ರಿಂದ 3 ದಿನ ಮದ್ಯ ಮಾರಾಟ ಬಂದ್..? ಪ್ರೇಮಿಗಳ ದಿನಾಚರಣೆ ಕಾರಣವಾ..?

ನ್ಯೂಸ್ ನಾಟೌಟ್: ಫೆ.14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಬೆಂಗಳೂರಿನಲ್ಲಿ ನಿಷೇಧಿಸಲಾಗಿದೆ.

ಪ್ರೇಮಿಗಳ ದಿನಾಚರಣೆ ಕಾರಣಕ್ಕೆ ಅಲ್ಲ ಎನ್ನಲಾಗಿದ್ದು, ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಫೆ.14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಫೆ. 14 ಸಂಜೆ 5 ಗಂಟೆಯಿಂದ ಫೆ.17 ಬೆಳಗ್ಗೆ 6 ಗಂಟೆಯವರಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳಾದ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರುದಕ್ಷಿಣ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿಕ್ಷಕರು ಮತ ಚಲಾಯಿಸಲಿದ್ದಾರೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಜ.16 ರಿಂದ ಫೆ.23ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

https://newsnotout.com/2024/02/dd-chandana-serial-re-telecast/

Related posts

ಕಡಬ: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿ..! ರೋಗಿ ಸ್ಥಳದಲ್ಲೇ ಸಾವು, ಕುಟುಂಬಸ್ಥರಿಗೆ ಗಾಯ..!

ಮಂಗಳೂರು: ಶಾಲೆಯ ಕಾಂಪೌಂಡ್ ಕುಸಿದು 7 ವರ್ಷದ ವಿದ್ಯಾರ್ಥಿನಿ ಮೃತ್ಯು..! ಇಲ್ಲಿದೆ ಸಂಪೂರ್ಣ ಮಾಹಿತಿ

ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣದ ಬಗ್ಗೆ ಮಹಿಳಾ ಆಯೋಗ ಹೇಳಿದ್ದೇನು? ಇದಕ್ಕೆ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ಹೇಗಿತ್ತು..?