ಕೊಡಗುರಾಜ್ಯ

ಫೆ.7ರಂದು ಕೊಡಗಿನ 5 ಶಾಲಾ ಕಾಲೇಜುಗಳಿಗೆ ರಜೆ..! ಕೊಡವರ ಸಂಸ್ಕೃತಿಯ ಉಳಿವಿಗಾಗಿ ಪಾದಯಾತ್ರೆ

129
Pc Cr: Public Tv
Spread the love

ನ್ಯೂಸ್ ನಾಟೌಟ್: ಕೊಡವರ ಸಂಸ್ಕೃತಿ ಉಳಿವಿಗಾಗಿ ಕೊಡಗಿನಲ್ಲಿ ನಡೆಯುತ್ತಿರುವ ಕೊಡವಾಮೆ ಬಾಳೋ ಪಾದಯಾತ್ರೆಗೆ ಬೆಂಬಲಿಸಿ ಫೆ.7ರಂದು ದಕ್ಷಿಣ ಕೊಡಗಿನ 5 ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಕುಟ್ಟದಿಂದ ಮಡಿಕೇರಿವರೆಗೆ ಆರಂಭವಾಗಿರುವ ಕೊಡವಾಮೆ ಬಾಳೊ ಪಾದಯಾತ್ರೆಯು ಮಡಿಕೇರಿಯಲ್ಲಿ ಸೇರುವ ಅಂತಿಮ ದಿನ ಅಂದರೆ ಫೆ.7ರಂದು ದಕ್ಷಿಣ ಕೊಡಗಿನ ಕೆಲವು ಪ್ರತಿಷ್ಠಿತ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ಕುಮಟೂರುವಿನ ಜೆ.ಸಿ ಶಿಕ್ಷಣ ಸಂಸ್ಥೆ, ಟಿ. ಶೆಟ್ಟಿಗೇರಿ ರೂಟ್ಸ್ ಶಿಕ್ಷಣ ಸಂಸ್ಥೆ, ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಸಂಸ್ಥೆ, ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾ ಸಂಸ್ಥೆ, ಗೋಣಿಕೊಪ್ಪದ ಕಾಪ್ಸ್ ವಿದ್ಯಾಸಂಸ್ಥೆ ರಜೆ ಘೋಷಣೆ ಮಾಡಿದೆ ಎಂದು ವರದಿ ತಿಳಿಸಿದೆ.

ಕೊಡವ ಆಡಳಿತ ಮಂಡಳಿಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಹಾಗೂ ಶಿಕ್ಷಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಜೆ ನೀಡಬೇಕೆಂದು ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಈ ಮನವಿಗೆ ಮಾನ್ಯತೆ ನೀಡಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ರಜೆ ಘೋಷಣೆ ಮಾಡಿದೆ.

See also  ಏ.1ರಿಂದ ಕರ್ನಾಟಕದಲ್ಲಿ ಟೋಲ್‌ ದರ ಶೇ.5ರಷ್ಟು ಏರಿಕೆ..! ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ದರ ಪರಿಷ್ಕರಣೆ..!
  Ad Widget   Ad Widget   Ad Widget   Ad Widget   Ad Widget   Ad Widget