ಕರಾವಳಿ

ಕೊಣಾಜೆ: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ, ಓರ್ವನ ಬಂಧನ

962

ಕೊಣಾಜೆ: ಮಧ್ಯಾಹ್ನ ಕಾಲೇಜು ಮುಗಿಸಿ ಮನೆ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಆರೋಪಿ. ಕಾಲೇಜಿನಿಂದ ಮನೆಯ ಕಡೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಯಾಕೂಬ್ ಕಿರುಕುಳ ನೀಡಿರುವುದಾಗಿ ದೂರಲಾಗಿದ್ದು, ಗ್ರಾಮಸ್ಥರು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಕಾರ್ಕಳ: 8 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ, ನನಸಾಯಿತು ಬಡಜನರ ಆಸ್ಪತ್ರೆಯ ಕನಸು
  Ad Widget   Ad Widget   Ad Widget   Ad Widget   Ad Widget   Ad Widget   Ad Widget