ನ್ಯೂಸ್ ನಾಟೌಟ್: ಶಾಲಾ ಮಕ್ಕಳಲ್ಲಿ ಜ್ವರ, ನೆಗಡಿ ಹಾಗೂ ಕೆಮ್ಮು ಇದ್ದರೆ ಅಂತಹ ಮಗುವಿಗೆ ರಜೆ ಕೊಡಿ ಎಂದು ರಾಜ್ಯದ ಎಲ್ಲಾ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಕೋವಿಡ್ ಸಂಬಂಧ ಸದ್ಯದ ಪರಿಸ್ಥಿತಿ ಕುರಿತು ತಜ್ಞರಿಂದ ಸಿಎಂ ಮಾಹಿತಿ ಪಡೆದುಕೊಂಡಿದ್ದಾರೆ.
ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದೆ.
* ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು… pic.twitter.com/iQVHt3hgne
— Siddaramaiah (@siddaramaiah) May 26, 2025
ಮಕ್ಕಳಿಗೆ ಜ್ವರ, ನೆಗಡಿ ಇದ್ದರೆ ಆ ಮಗುವಿಗೆ ರಜೆ ನೀಡಲು ಶಾಲೆಗಳಿಗೆ ಸೂಚನೆ ನೀಡಿ. ಪ್ರತಿ ವಾರ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳಲಿ. ಕೋವಿಡ್ ಗಾಗಿ ಒಂದು ಸಹಾಯವಾಣಿ ತೆರೆಯಿರಿ. ಕಳೆದ ಬಾರಿ ಕೋವಿಡ್ ಸಮಸ್ಯೆ ಆದ ರೀತಿ ಆಗಬಾರದು. ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನೀಡಿದ ಸೂಚನೆಗಳು #COVID19#Staysafe pic.twitter.com/YBYF2hIEuz
— Siddaramaiah (@siddaramaiah) May 26, 2025
ಈ ವೇಳೆ ಲಸಿಕೆ ಲಭ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಸಿಎಂ ಹೇಳಿದ್ದಾರೆ. ಇದಕ್ಕೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಸದ್ಯಕ್ಕೆ ಲಸಿಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಇಲ್ಲ. ಲಸಿಕೆ ತಯಾರಿಕಾ ಕಂಪನಿಗಳ ಜತೆ ಲಸಿಕೆ ಲಭ್ಯತೆ ಬಗ್ಗೆ ಪರಿಶೀಲಿಸುತ್ತೇವೆ ಎಂದು ಸಿಎಂಗೆ ತಿಳಿಸಿದರು. ಇದಕ್ಕೆ ಲಸಿಕೆ ನೀಡುವ ಅಗತ್ಯವಿಲ್ಲದಿದ್ದರೂ ತಯಾರಿ ಮಾಡಿಕೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.