ಕ್ರೈಂದೇಶ-ವಿದೇಶರಾಜ್ಯವೈರಲ್ ನ್ಯೂಸ್ಸಿನಿಮಾ

ದರ್ಶನ್‌ ಸೇರಿ ಹತ್ತಕ್ಕೂ ಹೆಚ್ಚು ಜನರ ಫಿಂಗರ್ ಪ್ರಿಂಟ್ ಮ್ಯಾಚ್..! ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಪ್ರಬಲ ಸಾಕ್ಷಿ ಕೊಟ್ಟ ಎಫ್‌ಎಸ್‌ಎಲ್‌ ವರದಿ..!

253

ನ್ಯೂಸ್‌ ನಾಟೌಟ್‌: ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ ಎಂದು ವರದಿ ತಿಳಿಸಿದೆ. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್ (Darshan), ಪವಿತ್ರಾ ಗೌಡ (Pavithra Gowda) ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ ಎನ್ನಲಾಗಿದೆ.

ಕ್ರೈಂ ಸೀನ್, ಶವ ಬಿಸಾಕಿದ ಜಾಗ, ಶವ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್ ಕೊಠಡಿ, ಮೃತನ‌ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಾಗಾಟ ಮಾಡಿದ ಕಾರ್, ಆರೋಪಿಗಳ ಬಟ್ಟೆಗಳ ಮೇಲಿನ‌ ಫಿಂಗರ್ ಪ್ರಿಂಟ್ ಸಂಗ್ರಹ ಮಾಡಲಾಗಿತ್ತು.

ಎಫ್‌ಎಸ್‌ಎಲ್‌ ತಜ್ಞರನ್ನ ಬಳಸಿ ಫಿಂಗರ್ ಪ್ರಿಂಟ್ ಸಂಗ್ರಹಿಸಲಾಗಿತ್ತು. ಆರೋಪಿಗಳ ಬಂಧನದ ಬಳಿಕ ಎಲ್ಲರ ಫಿಂಗರ್ ಪ್ರಿಂಟ್ ಪಡೆದು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಫಿಂಗರ್‌ ಪ್ರಿಂಟ್‌ ಹೋಲಿಕೆಯಾಗಿದ್ದು ಕೋರ್ಟ್‌ ವಿಚಾರಣೆಯ ಸಂದರ್ಭದಲ್ಲಿ ಪ್ರಮುಖ ಸಾಕ್ಷ್ಯವಾಗಲಿದೆ.

Click 👇

https://newsnotout.com/2024/07/darshan-kannada-news-evidences-collection-reaches-more-than-200
https://newsnotout.com/2024/07/police-absonded-kannada-news-bsf-in-madyapradesh-kannada-news
https://newsnotout.com/2024/07/kannada-news-fake-doctors-cought-in-bagalakot-ditrict-news-police
https://newsnotout.com/2024/07/laxury-theft-by-rohith-kannada-news-royal-life-kannada-news-gujarat-police
See also  ಮದುವೆ ಆಗುತ್ತಿದ್ದ ವೇಳೆ ಪತಿಗೆ ಮಂಟಪದಲ್ಲೇ ಚಪ್ಪಲಿಯಲ್ಲಿ ಹೊಡೆದ ಪತ್ನಿ..! ಮುಂದೇನಾಯ್ತು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget