Uncategorized

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ..! ಪ್ರತಾಪ್ ಸಿಂಹ ವಿರುದ್ಧ ಎಫ್‌.ಐ.ಆರ್ ದಾಖಲು..!

ನ್ಯೂಸ್ ನಾಟೌಟ್ : ಗಣೇಶ ವಿಸರ್ಜನೆಯ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆ.21 ರಂದು ಯಾದಗಿರಿಯ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಮುಸ್ಲಿಮರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು.

ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದಿದ್ದರು. ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

Click

https://newsnotout.com/2024/09/bike-royal-enfield-kannada-news-viral-news-fire-issue-cigarate/

Related posts

ದರ್ಗಾ ವಿವಾದ: ತಾಂಬೂಲ ಪ್ರಶ್ನೆ, 144 ಸೆಕ್ಷನ್ ಜಾರಿ

ದ.ಕ. ದಿಂದ ಶಬರಿಮಲೆಗೆ ಹೋಗಲು ಕೇರಳದ ವಾಹನಗಳಿಗೆ ಗಡಿಯಲ್ಲಿ ಅವಕಾಶ ಕೊಡಿ-ಶಾಸಕ ಯು.ಟಿ.ಖಾದರ್

೫೦೦ರ ನೋಟು ತಂದ ಆಪತ್ತು- ಕೆಂಡಾಮಂಡಲನಾದ ಗಂಡ, ಪತ್ನಿಗೆ ಅಕ್ರಮ ಸಂಬಂಧದ ಕಥೆ ಕಟ್ಟಿ ಪತ್ನಿಯನ್ನೇ ಮುಗಿಸಿದ- ಮೂವರು ಮಕ್ಕಳ ಕೊಲೆಗೂ ಯತ್ನ