ಕರಾವಳಿದೇಶ-ಪ್ರಪಂಚ

ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ..!ಮಹಿಳಾ ಹೋರಾಟಗಾರ್ತಿ ನಜ್ಮಾ ನಝೀರ್‌ರಿಂದ ಕೇಸ್‌

ನ್ಯೂಸ್ ನಾಟೌಟ್ :  ಮುಸ್ಲಿಂ ಮಹಿಳೆಯರ ಕುರಿತ ಹೇಳಿಕೆ ಮತ್ತು ಪ್ರಚೋದನಾಕಾರಿ‌ ಭಾಷಣ ಮಾಡಿದ ಆರೋಪದ ಮೇರೆಗೆ ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕಳೆದ ಭಾನುವಾರದಂದು ಶ್ರೀರಂಗಪಟ್ಟಣದಲ್ಲಿ ಹಿಂದೂ‌ ಜಾಗರಣಾ ವೇದಿಕೆ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆ ವೇಳೆ ಪ್ರಚೋದನಾಕಾರಿ‌ ಭಾಷಣ ಮಾಡಿದ್ದಾರೆ ಅನ್ನುವ ಆರೋಪ ಕೇಳಿ ಬಂದಿತ್ತು.ಈ ಹಿನ್ನಲೆಯಲ್ಲಿ ಅವರ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಮಹಿಳಾ ಹೋರಾಟಗಾರ್ತಿ ನಜ್ಮಾ ನಝೀರ್ ಎಂಬುವರು ದೂರು ನೀಡಿದ್ದು, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದನೆ, ಸಾರ್ವಜನಿಕವಾಗಿ ಬೆದರಿಕೆ, ಧರ್ಮಕ್ಕೆ ಅವಮಾನ, ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 354, 294, 509, 506, 153A, 295, 295 A, 298ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಡಿಸೆಂಬರ್ 24 ರಂದು ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನ ಉದ್ದೇಶಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಮಾತನ್ನಾಡಿದ್ದರು.

Related posts

ಪುತ್ತೂರು:ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರ್ಜರಿ ಮತಬೇಟೆ

ಪ್ರವೀಣ್ ಹತ್ಯೆ ಬೆಳ್ಳಾರೆ ಪೊಲೀಸ್ ಪೇದೆಗೆ ಗೊತ್ತಿತ್ತಾ?, ಜಾಲತಾಣದಲ್ಲಿ ಪೋಸ್ಟ್‌ ವೈರಲ್

ದಕ್ಷಿಣ ಕನ್ನಡ ಸಹಕಾರಿ ಬ್ಯಾಂಕ್‌ನಲ್ಲಿ 123 ಹುದ್ದೆಗೆ ಅರ್ಜಿ ಆಹ್ವಾನ, ಕ್ಲರ್ಕ್, ಕಂಪ್ಯೂಟರ್ ಪ್ರೊಗ್ರಾಮರ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ