ದೇಶ-ಪ್ರಪಂಚ

ಪಟಾಕಿ ಸ್ಫೋಟಗೊಂಡು ಕಾರ್ಮಿಕ ಮೃತ್ಯು, ಮತ್ತಿಬ್ಬರಿಗೆ ಗಂಭೀರ ಗಾಯ;ಘಟನೆ ನಡೆದಿದ್ದೆಲ್ಲಿ?

ನ್ಯೂಸ್‌ ನಾಟೌಟ್ : ಮಂಡ್ಯದಲ್ಲಿ ಪಟಾಕಿ (Firecrackers) ಸ್ಫೋಟಗೊಂಡು (Fire Accident) ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮಂಡ್ಯ ತಾಲೂಕಿನ ಜಿ.ಕೆಬ್ಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡು ಮೂಲದ ರಮೇಶ್ (67) ಮೃತ ದುರ್ದೈವಿಯೆಂದು ತಿಳಿದು ಬಂದಿದೆ.

ನಾಗಲಿಂಗ ಎಂಬಾತ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಬ್ಬಳ್ಳಿ ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ಭಾನುವಾರ ರಾತ್ರಿ ಗ್ರಾಮದಲ್ಲಿ ಅದ್ಧೂರಿಯಾಗಿ ಹಬ್ಬ ನೆರವೇರಿತ್ತು. ಬಳಿಕ ಗ್ರಾಮದ ಆಲೆಮನೆಯೊಂದರಲ್ಲಿ ನಾಲ್ವರು ತಂಗಿದ್ದರು.

ಇಂದು ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳನ್ನು ತುಂಬುವಾಗ ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿ ಜತೆಗೆ ಆಲೆಮನೆಯು ಹೊತ್ತಿಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ.

ಸ್ಥಳಕ್ಕೆ ಡಿಸಿ ಡಾ ಕುಮಾರ್, ಎಸ್ ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಮಿಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆರೆಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

ಇನ್ನು ಮುಂದೆ ಕೇರಳದ ಈ ಶಾಲೆಯಲ್ಲಿ ‘ಸರ್’ ‘ಮೇಡಂ’ ಸಂಬೋಧನೆ ಇಲ್ಲ!

ಕೋಲ್ಕತ್ತಾ ವೈದ್ಯೆಯ ಭೀಕರ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಸಂಜಯ್ ರಾಯ್ ದೋಷಿ ಎಂದ ಕೋರ್ಟ್..! 57 ದಿನಗಳಲ್ಲಿ 50 ಸಾಕ್ಷಿಗಳನ್ನು ಆಲಿಸಿದ ಬಳಿಕ ತೀರ್ಪು ಪ್ರಕಟ

ಸ್ಕೂಟಿಗೆ ಡಿಕ್ಕಿ ಹೊಡೆದು 6 ವರ್ಷದ ಮಗುವನ್ನು 2 ಕಿ.ಮೀ ಎಳೆದೊಯ್ದ ಟ್ರಕ್