ಕ್ರೈಂವೈರಲ್ ನ್ಯೂಸ್

ಭಯಪಡಿಸಲು ಎಸೆದ ಪಟಾಕಿ ಅಫ್ಜಲ್ ನ ಜೀವ ತೆಗೆದದ್ದೇಗೆ? ಈ ಬಗ್ಗೆ ಪೊಲೀಸರು ಹೇಳಿದ್ದೇನು?

ನ್ಯೂಸ್‌ನಾಟೌಟ್‌: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ ಒಬ್ಬನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ಮೃತ ವ್ಯಕ್ತಿಯನ್ನು ನಾತು ಅಕಾ ಅಫ್ಜಲ್ ಎಂದು ಗುರುತಿಸಲಾಗಿದೆ. ದೀಪಾವಳಿ ಆಚರಣೆ ವೇಳೆ ಆತನ ಮೇಲೆ ಪಟಾಕಿ ಹಚ್ಚಿ ಎಸೆಯಲಾಗಿದೆ. ವ್ಯಕ್ತಿ ಪಟಾಕಿ ಸಿಡಿದ ಶಬ್ದದಿಂದ ಆತಂಕಕ್ಕೊಳಗಾಗಿ ಕುಸಿದು ಬಿದ್ದಿದ್ದಾನೆ. ಬಳಿಕ ಅಲ್ಲಿಯೇ ಸಾವಿಗೀಡಾಗಿದ್ದಾನೆ ಎನ್ನಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆರೆಯಾದ ವೀಡಿಯೋದಲ್ಲಿ ಇಬ್ಬರು ಮತ್ತೊಂದು ಗುಂಪಿನ ಜನರೊಂದಿಗೆ ಮಾತನಾಡಿ, ಅವರು ಹೊರಡಲು ತಿರುಗಿದಾಗ ಇದ್ದಕ್ಕಿದ್ದಂತೆ ಒಬ್ಬರ ಮೇಲೆ ಪಟಾಕಿ ಹಚ್ಚಿ ಎಸೆದಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು (Police) ಆರೋಪಿಯನ್ನು ಪ್ರದೀಪ್ ಎಂದು ಗುರುತಿಸಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಕಾರ್ಯಾಚರಣೆ ಮುಂದುವರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Related posts

ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ..! ಕ್ಯಾನ್ಸರ್ ಚಿಕಿತ್ಸೆಗಾಗಿ ದಾಖಲಾಗಿದ್ದ ಆರೋಪಿಯ ತಾಯಿ..! ಇಲ್ಲಿದೆ ವಿಡಿಯೋ

ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲಿ ತಾಯಿ ಸಾವು..! ಇಲ್ಲಿದೆ ಮನಕಲಕುವ ವಿಡಿಯೋ

ಒಂದು ಸೀರೆ ತಯಾರಿಸಲು 2 ವರ್ಷ ಬೇಕಾಯ್ತಾ..? ಇದರ ಬೆಲೆ ಬರೋಬ್ಬರಿ 21.9 ಲಕ್ಷ ರೂ.! ಈ ಸೀರೆ ಯಾಕಿಷ್ಟು ದುಬಾರಿ?