ಕ್ರೈಂದೇಶ-ವಿದೇಶವೈರಲ್ ನ್ಯೂಸ್ಸಿನಿಮಾ

ಗನ್ ​ನಿಂದ ತನ್ನ ಕಾಲಿಗೆ ಶೂಟ್ ಮಾಡಿಕೊಂಡ ಬಾಲಿವುಡ್ ನ ಖ್ಯಾತ ನಟ..! ಐಸಿಯುನಲ್ಲಿ ಚಿಕಿತ್ಸೆ..!

ನ್ಯೂಸ್ ನಾಟೌಟ್: ನಟ ಗೋವಿಂದ ತಮ್ಮದೇ ಗನ್ ​ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಅ.01 ರ ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸದ್ಯ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದು ಆಕಸ್ಮಿಕವಾಗಿ ನಡೆದಿರೋ ಘಟನೆ ಎನ್ನಲಾಗಿದ್ದು, ಗನ್​ನಿಂದ ಫೈಯರ್ ಆದ ಬುಲೆಟ್ , ಅವರ ಕಾಲಿಗೆ ತಾಗಿದೆ. ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್​ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು ರೆಡಿ ಆಗುತ್ತಿದ್ದರು. ಅವರು ತಮ್ಮ ಪರವಾನಗಿ ಗನ್​ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್​ ಸಿಡಿದಿದೆ ಎನ್ನಲಾಗಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟನ್ನು ತೆಗೆದಿದ್ದಾರೆ. ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ಗೋವಿಂದ ಅವರು ಬಾಲಿವುಡ್​ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರಿಗೆ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, ಈಗ ಮೊದಲಿನ ಬೇಡಿಕೆ ಉಳಿದಿಲ್ಲ. ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.

Click

https://newsnotout.com/2024/10/babies-nomore-kananda-news-children-k-viral-issue/

Related posts

ಪುತ್ತೂರು: ಯುವತಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ , ಸುಳ್ಯದ ಯುವಕನಿಂದ ಕೃತ್ಯದ ಶಂಕೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಪಕ್ಷಕ್ಕೆ ಸೇರಿಸಿಕೊಂಡ ಶಿವಸೇನೆ..? ತೀವ್ರ ವಿರೋಧದ ಬಳಿಕ ನಿರ್ಧಾರ ತಡೆಹಿಡಿದ ಮಹಾರಾಷ್ಟ್ರ ಮುಖ್ಯಮಂತ್ರಿ..!

ಕುಡಿತದ ಅಮಲಿನಲ್ಲಿ ತಮ್ಮನನ್ನೇ ಕೊಂದ ಅಣ್ಣ..!