ಕರಾವಳಿಕ್ರೈಂ

ಮಣಿಪಾಲ: ಗಾಂಜಾ ಸೇವಿಸಿದ ಐವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

414

ನ್ಯೂಸ್ ನಾಟೌಟ್: ಮಣಿಪಾಲದ ಅಪಾರ್ಟ್‌ಮೆಂಟ್‌ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ವಿದ್ಯಾರ್ಥಿಗಳನ್ನು ನಿಖಿಲ್(22 ), ತನ್ವೀರ್ ರೆಡ್ಡಿ(25 ), ಶರಣ್ ಶೆಟ್ಟಿ(22), ರಾಹುಲ್ ಸೀಮ್(21 ), ತುಶಾರ್(21 ) ಎಂದು ಗುರುತಿಸಲಾಗಿದೆ. ಮಣಿಪಾಲ ಠಾಣಾ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ ಅವರು ಗಸ್ತು ತಿರುಗುತ್ತಿದ್ದಾಗ ಅಪಾರ್ಟ್‌ಮೆಂಟ್‌ವೊಂದರ ಬಳಿ ಐವರು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡುತ್ತಿದ್ದರು. ಸಂದೇಹದ ಮೇಲೆ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದಾಗ ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

See also  ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಘೋಷಣೆ, ಯಾವತ್ತಿನಿಂದ ಆರಂಭ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget