ಕ್ರೈಂಬೆಂಗಳೂರು

ಫ್ಲೈ ಓವರ್ ನಲ್ಲಿ ಸರಣಿ ಅಪಘಾತ, ಸಂಚಾರ ನಿಯಂತ್ರಿಸುತ್ತಿದ್ದ ಸಿಬ್ಬಂದಿ ದಾರುಣ ಸಾವು

ನ್ಯೂಸ್‌ ನಾಟೌಟ್‌: ಸರಣಿ ಅಪಘಾತ ಸಂಭವಿಸಿ ಎಲಿವೇಟೆಡ್ ಫ್ಲೈ ಓವರ್ ಸಿಬ್ಬಂದಿ ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್‌ ಮೇಲೆ ಶನಿವಾರ ತಡರಾತ್ರಿ (ಆ.3) ಸಂಭವಿಸಿದೆ. ಅಪಘಾತದಿಂದ ಎಲಿವೇಟೆಡ್ ಫ್ಲೈ ಓವರ್ ಸಿಬ್ಬಂದಿ ಮಂಜುನಾಥ್ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರೊಂದು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕೆಟ್ಟು ನಿಂತಿತ್ತು. ಹಿಗಾಗಿ ಫ್ಲೈ ಓವರ್ ಸಿಬ್ಬಂದಿ ಟೋಯಿಂಗ್ ವೆಹಿಕಲ್ ಕರೆಸಿ ತೆರವು ಮಾಡಿಸುತ್ತಿದ್ದರು. ಈ ವೇಳೆ ಮಂಜುನಾಥ್‌ ಅವರು ಫ್ಲೈಓವರ್ ಟ್ರಾಫಿಕ್ ನಿಯಂತ್ರಣ ಮಾಡುತ್ತಿದ್ದರು. ಇನ್ನೇನು ಕಾರು ಟೋಯಿಂಗ್ ಮಾಡಬೇಕು ಎನ್ನುವ ವೇಳೆ ಅತಿವೇಗವಾಗಿ ಬಂದ ಗೂಡ್ಸ್‌ ವಾಹನದಿಂದ ಸರಣಿ ಅಪಘಾತ ಸಂಭವಿಸಿದೆ. ಗೂಡ್ಸ್‌ ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಫ್ಲೈ ಓವರ್ ಟೋಲ್ ಸಿಬ್ಬಂದಿ ವಾಹನ ಮತ್ತು ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಬಳಿಕ ಪಲ್ಟಿ ಹೊಡೆದಿದೆ.

ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜುನಾಥ್ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರಿಗೆ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Related posts

ಬೆಂಗಳೂರು:ವಿದ್ಯುತ್‌ ತಂತಿ ತುಳಿದು ತಾಯಿ-ಮಗು ದಾರುಣ ಅಂತ್ಯ ಪ್ರಕರಣ;ಹೆಗ್ಗಣಗಳ ಮೇಲೆ ಆರೋಪ ಹೊರಿಸಿದ ಬೆಸ್ಕಾಂ..!

ಅಡಿಕೆ ಕೀಳುತ್ತಿದ್ದಾಗ ವಿದ್ಯುತ್‌ ತಂತಿಗೆ ಕಾರ್ಬನ್‌ ದೋಟಿ ತಗುಲಿ ಯುವಕ ಸಾವು

ಒಡಿಶಾದ ಬರ್ಗರ್‌ ನಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು! ಹಲವು ಅನುಮಾನಕ್ಕೆ ಕಾರಣವಾದ ಸರಣಿ ರೈಲು ದುರಂತ!