ವೈರಲ್ ನ್ಯೂಸ್ಶಿಕ್ಷಣ

ಏನಿದು ಸರ್ಕಾರಿ ಶಾಲಾ ಮಕ್ಕಳಿಗೆ ಚಪ್ಪಲಿ ಭಾಗ್ಯ..? ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿರುವುದೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರ ಮತ್ತು ಶೂ-ಸಾಕ್ಸ್ ವಿತರಣೆ ಇದೆ ಆದರೆ ಆ ಪಟ್ಟಿಗೆ ಈಗ ಮತ್ತೊಂದು ಸೇರ್ಪಡೆಯಾಗಿದ್ದು, ಹಲವು ಚರ್ಚೆಗೆ ಕಾರಣವಾಗಿದೆ. ಪ್ರಸ್ತುತ ಯೋಜನೆ ಇರುವಾಗಲೇ ಸರ್ಕಾರಿ ಶಾಲೆ ಮಕ್ಕಳಿಗೆ ಶೂ ಬದಲಾಗಿ ‘ಚಪ್ಪಲಿ ಭಾಗ್ಯ’ ಸಿಕ್ಕಿದ್ದು, ಇದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಲಕ್ಷ್ಮೇಶ್ವರ ತಾಲೂಕಿನ ಕೆಲವು ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರಕಾರದಿಂದ ಪೂರೈಕೆಯಾಗುವ ಸಮವಸ್ತ್ರದಲ್ಲಿ ಶೂ, ಸಾಕ್ಸ್ ಬದಲಿಗೆ ಚಪ್ಪಲಿ ಸಿಕ್ಕಿದ್ದು, ಈ ಬಗ್ಗೆ ಪೋಷಕರು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಕೆಲವು ವಾರ್ಡ್‌ಗಳ ಪೋಷಕರು ತಮ್ಮ ಮಕ್ಕಳಿಗೆ ಶೂಗಳ ಬದಲಾಗಿ ಚಪ್ಪಲಿಯನ್ನು ಬಯಸುತ್ತಾರೆ. ಹೀಗಾಗಿ ಚಪ್ಪಲಿ ನೀಡಿದ್ದೇವೆಂದು ಅಧಿಕಾರಿಗಳು ಹೇಳಿದ್ದಾರೆ. ಗದಗ ಜಿಲ್ಲೆಯ ಅನೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೂ ಸಿಕ್ಕಿವೆ. ಆದರೆ, ಲಕ್ಷ್ಮೇಶ್ವರ ತಾಲೂಕಿನ ಮೂರು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೂಗಳಿಗೆ ಬದಲಾಗಿ ಚಪ್ಪಲಿಗಳನ್ನು ವಿತರಣೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಿಗೆ ಶೂ ಮತ್ತು ಸಾಕ್ಸ್ ನೀಡುವಂತೆ ಸರ್ಕಾರ ಆದೇಶಿಸಿದೆ. ಆದರೆ ಕೆಲವು ವಿದ್ಯಾರ್ಥಿಗಳು ಬಯಸಿದ ಕಾರಣ ಚಪ್ಪಲಿಗಳನ್ನು ನೀಡಲಾಗಿದೆ ಎಂದು ಆಯಾ ಶಾಲೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ದಸರಾ ಹಬ್ಬದ ರಜೆಗೂ ಮೊದಲು ವಿದ್ಯಾರ್ಥಿಗಳಿಗೆ ಶೂ-ಸಾಕ್ಷ್, ಸಮವಸ್ತ್ರ ವಿತರಿಸಲು ಆದೇಶಿಸಿತ್ತು. ಎಲ್ಲ ಶಾಲೆಗಳಿಗೆ ಈ ಬಗ್ಗೆ ನೋಟಿಸ್ ನೀಡಿತ್ತು. ಹೀಗಿದ್ದರೂ ಲಕ್ಷ್ಮೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 2, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸ್ತಿಬಾನ, ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆಂಚಲಾಪುರದಲ್ಲಿ ಈಗ ವಿದ್ಯಾರ್ಥಿಗಳಿಗೆ ಶೂಗಳ ಬದಲಾಗಿ ಚಪ್ಪಲಿ ನೀಡಲಾಗಿದೆ. ಈ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆಯೇ? ಸರ್ಕಾರ ಶೂ ನೀಡುವಂತೆ ಹೇಳಿದ್ದರೂ ಆದೇಶ ಧಿಕ್ಕರಿಸಿ ನಿಯಮ ಪಾಲಿಸದೇ ಚಪ್ಪಲಿ ನೀಡಲಾಗಿದೆಯೇ? ಎಂಬುದು ಬಹಿರಂಗೊಳ್ಳಬೇಕಿದೆ .

ನಾವು ಶೂಗಳು ಮತ್ತು ಸಾಕ್ಸ್‌ಗಳನ್ನು ಬಯಸಿದ್ದೆವು. ಆದರೆ ನಮಗೆ ಚಪ್ಪಲಿಗಳನ್ನು ನೀಡಲಾಗಿದೆ ಎಂದು ಕೆಲ ಮಕ್ಕಳು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಅಧಿಕಾರಿಗಳು ಚಿರತೆ ಕೊಂದರೆ ಶಿಕ್ಷೆ ಇಲ್ಲವೇ? ಬೆಂಗಳೂರಿನಲ್ಲಿ ಕಾರ್ಯಾಚರಣೆ ವೇಳೆ ಅಧಿಕಾರಿಗಳ ಗುಂಡೇಟಿಗೆ ಬಲಿಯಾದ ಚಿರತೆ ಬಗ್ಗೆ ಕಾನೂನು ಕ್ರಮವೇನು?

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಶಾಲೆ, ಕಾಲೇಜಿಗೆ ನಾಳೆ(ಜು.18) ರಜೆ, ಎಲ್ಲೆಲ್ಲಿ ರಜೆ..? ಇಲ್ಲಿದೆ ಡಿಟೇಲ್ಸ್

ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಉಪೇಂದ್ರ ದ್ವಿವೇದಿ ಆಯ್ಕೆ, ಸೇನೆಯಲ್ಲಿ 40 ವರ್ಷಗಳ ಸುದೀರ್ಘ ಸೇವೆ ಮಾಡಿದ್ದ ಲೆಫ್ಟಿನೆಂಟ್ ಜನರಲ್