ನ್ಯೂಸ್ ನಾಟೌಟ್: ದಾವಣಗೆರೆಯ ಚನ್ನಗಿರಿ ತಾಲೂಕಿನ ಶಾಂತಿಸಾಗರದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿದವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಇಂದು(ಜ.12) ಶಾಕ್ ನೀಡಿದ್ದಾರೆ. ಒತ್ತುವರಿ ಮಾಡಿದ್ದ 15 ಎಕರೆ ಅರಣ್ಯ ಪ್ರದೇಶವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಶಾಂತಿಸಾಗರದ ಗುಡುಂಘಟ್ಟದ ಸರ್ವೇ ನಂ.43 ರಲ್ಲಿ 15 ಎಕರೆ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಈ ಭಾಗದಲ್ಲಿ ಜನರು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಆ ಜಾಗದಲ್ಲಿ ಅಡಿಕೆ ಮತ್ತು ಬಾಳೆ ಬೆಳೆದಿದ್ದರು. ಅಧಿಕಾರಿಗಳು 3 ಸಾವಿರ ಅಡಿಕೆ ಮತ್ತು ಬಾಳೆ ಗಿಡಗಳನ್ನು ತೆರವು ಮಾಡಿ, ಜಾಗವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗದೆ. .ಸುಮಾರು ವರ್ಷಗಳಿಂದ ರೈತರು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿ ಸಾಗುವಳಿ ಮಾಡಿಕೊಂಡು ಬಂದಿದ್ದರು. ಬಳಿಕ ಜಾಗದಲ್ಲಿ ಅಡಿಕೆ ತೋಟ ಮಾಡಿದ್ದರು. ಆದರೆ ಈಗ, ಅಡಿಕೆ, ಬಾಳೆಗಿಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಿಬ್ಬಂದಿ ತೆರವು ಮಾಡಿದ್ದಾರೆ.
Click