ಕರಾವಳಿಕ್ರೈಂ

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ !

ನ್ಯೂಸ್‌ ನಾಟೌಟ್‌: ನಗರದ ಕೆ.ಎಸ್‌. ರಾವ್‌ ರಸ್ತೆಯ ಲಾಡ್ಜ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48), ಅವರ ಪತ್ನಿ ನಿರ್ಮಲಾ (45), ಅವಳಿ ಹೆಣ್ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿಯೇ ಡೆತ್‌ನೋಟ್‌ ಪತ್ತೆಯಾಗಿದ್ದು, ಸಾಲದ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ನಾಲ್ವರಲ್ಲಿ ಓರ್ವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿದ್ದರು. ಹೆಂಡತಿ ಮಕ್ಕಳಿಗೆ ವಿಷವುಣಿಸಿ ದೇವೇಂದ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆಯಿದೆ. ಬಂದರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Related posts

ನಡು ರಸ್ತೆಯಲ್ಲೇ ಸಬ್‌ ಇನ್ಸ್‌ ಪೆಕ್ಟರ್‌ಗೆ ಥಳಿಸಿದ್ದೇಕೆ ಜನ? ಉಳಿದ ಪೊಲೀಸರು ಹೆದರಿ ಓಡಿದ್ದೇಕೆ? ಇಲ್ಲಿದೆ ವೈರಲ್ ವಿಡಿಯೋ

‘ಕಲಕುಂಡಿ’ಗೆ ಟಿಕೆಟ್‌ ಹರಿದ ಕೆಎಸ್‌ಆರ್‌ಟಿಸಿ ಬಸ್ ಕಂಡೆಕ್ಟರ್‌..!

ಅಡ್ತಲೆ: ಇಕ್ಕಟ್ಟಿನ ರಸ್ತೆಯಲ್ಲಿ ಅಪಾಯಕ್ಕೆ ಆಹ್ವಾನ..!, ಜೀವ ಹೋಗುವ ಮೊದಲು ಎಚ್ಚೆತ್ತುಕೊಳ್ಳಿ ಓಟು ಪಡೆದ ಜನ ಪ್ರತಿನಿಧಿಗಳೇ..