ನ್ಯೂಸ್ ನಾಟೌಟ್: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭಾಗ್ಯ ಕಲ್ಪಿಸಿದ್ದೇ ತಡ ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದೇವಸ್ಥಾನಕ್ಕೆ ಸಾಗರೋಪಾದಿಯಲ್ಲಿ ಮಹಿಳಾ ಭಕ್ತರ ದಂಡು ಹರಿದು ಬಂದಿದೆ.
ಬಸ್‌ಗಳಲ್ಲಿ ಕಾಲಿಡಕ್ಕೂ ಜಾಗವಿಲ್ಲದಷ್ಟು ಮಹಿಳಾ ಪ್ರಯಾಣಿಕರು ತುಂಬಿಕೊಂಡಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬರುತ್ತಿದ್ದಾರೆ. ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿ ಕುಕ್ಕೆಗೆ ತೆರಳುವ ಬಸ್‌ನಲ್ಲೂ ಫುಲ್ ರಶ್ ಆಗುತ್ತಿದೆ ಎಂದು ಪ್ರಯಾಣಿಕರು ಹೇಳಿಕೊಳ್ಳುತ್ತಿದ್ದಾರೆ.