Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಸಾರ್ವಜನಿಕರ ಮೇಲೆ ಪೆಟ್ರೋಲ್ ಬಾಂಬ್ ಎಸೆದ ವ್ಯಕ್ತಿ..! 6 ಜನ ಆಸ್ಪತ್ರೆಗೆ ದಾಖಲು

259

ನ್ಯೂಸ್ ನಾಟೌಟ್: ದುಷ್ಕರ್ಮಿಯೋರ್ವ ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಇಸ್ರೇಲ್ ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ಘಟನೆ ಅಮೆರಿಕದ ಕೊಲೊರಾಡೋದ ಬೌಲ್ಡರ್‌ ನಲ್ಲಿ ನಡೆದಿದೆ.

ಘಟನೆಯಲ್ಲಿ 6 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೊರಾಡೋದ ಬೌಲ್ಡರ್‌ ನಲ್ಲಿ ಗಾಜಾದಲ್ಲಿನ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಚರ್ಚಿಸುವ ಸಲುವಾಗಿ ಇಸ್ರೇಲ್ ನಾಗರಿಕರು ಸಭೆ ಸೇರಿದ್ದರು. ಈ ವೇಳೆ ದುಷ್ಕರ್ಮಿ ಬಾಟಲ್‌ ನಲ್ಲಿ ತುಂಬಿಸಿದ್ದ ಪೆಟ್ರೋಲ್ ಬಾಂಬ್‌ ಗಳನ್ನು ನಾಗರಿಕರತ್ತ ಎಸೆದು ‘ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದಾನೆ.

ಜನರ ಮೇಲೆ ಫೈರ್ ಬಾಂಬ್ ಎಸೆದ ವ್ಯಕ್ತಿಯನ್ನು ಮೊಹಮ್ಮದ್ ಸಬ್ರಿ ಸೊಲಿಮಾ (45) ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸೊಲಿಮಾ ಅಮೆರಿಕದಲ್ಲಿ ಪ್ಯಾಲೆಸ್ತೀನ್ ಪರ ನಡೆಯುತ್ತಿದ್ದ ಹಲವು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ ಐ ಆರ್‌..! ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಆರೋಪ..!

ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ ವಿರುದ್ಧ ಎಫ್‌ ಐ ಆರ್..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಬಡ ಮಹಿಳೆಗೆ 30 ತಿಂಗಳಲ್ಲಿ 25 ಬಾರಿ ಹೆರಿಗೆ !! ಅಮಾಯಕರಿಗೆ ವಂಚಿಸಿ ಸರ್ಕಾರಿ ಯೋಜನೆ ದುರುಪಯೋಗ
  Ad Widget   Ad Widget   Ad Widget   Ad Widget   Ad Widget   Ad Widget   Ad Widget