Latestಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

ಉಚಿತ ಟಿಕೆಟ್‌ ಘೋಷಣೆ ಮಾಡಿದ್ದರಿಂದ ಕಾಲ್ತುಳಿತವಾಗಿದೆ ಎಂದ ಅಮಾನತ್ತಾಗಿರುವ ಐಪಿಎಸ್‌ ಅಧಿಕಾರಿ ದಯಾನಂದ್‌..! ಮುಕ್ತಾಯ ಹಂತಕ್ಕೆ ಬಂದ ವಿಚಾರಣೆ..!

725

ನ್ಯೂಸ್ ನಾಟೌಟ್ : ಉಚಿತ ಟಿಕೆಟ್‌ ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತು ಎಂದು ಹಲವು ದಿನಗಳ ಬಳಿಕ ಅಮಾನತ್ತಾಗಿರುವ ಐಪಿಎಸ್‌ ಅಧಿಕಾರಿ ದಯಾನಂದ್‌ (Dayanand) ತಿಳಿಸಿದ್ದಾರೆ ಎನ್ನಲಾಗಿದೆ.

ಆರ್‌ಸಿಬಿ (RCB) ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದೆ. ವಿಚಾರಣೆಯ ಪ್ರಮುಖ ಭಾಗವಾದ ದಯಾನಂದ್‌ ಅವರ ಹೇಳಿಕೆಯನ್ನು ದಾಖಲು ಮಾಡಲಾಗಿದೆ.

ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ(ಜೂ.26) ವಿಚಾರಣೆಗೆ ಹಾಜರಾದ ದಯಾನಂದ್‌ ಅಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಘಟನೆ ನಡೆದ ದಿನ 21 ಗೇಟ್‌ ಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿದ್ದೆ. ಸಂಪೂರ್ಣವಾಗಿ ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು. ಪ್ರತಿ ಬಾರಿ ಐಪಿಎಲ್ ಮ್ಯಾಚ್ ನಡೆಯುವಾಗ ಇರುವಷ್ಟು ಬಂದೋಬಸ್ತ್‌ ಮಾಡಿಕೊಳ್ಳಲಾಗಿತ್ತು. ಆದರೆ ಅಂದು ಗೇಟ್ ತೆಗೆಯಲು ತಡಮಾಡಿದ್ದರು. ಜೊತೆಗೆ ಉಚಿತ ಟಿಕೆಟ್‌ ಎಂದು ಘೋಷಣೆ ಮಾಡಿದ್ದರಿಂದ ಇಷ್ಟೆಲ್ಲ ಅವಾಂತರ ನಡೆದಿದೆ ಎಂದು ಹೇಳಿಕೆ ದಾಖಲಿಸಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಬಲಿಯಾದ 11 ಜನರ ಸಾವಿನ ತನಿಖೆ ಅಂತಿಮ ಹಂತಕ್ಕೆ ಬಂದಿದೆ. ಇಂದು ಇಡೀ ದಿನ ಓಪನ್ ಡೇ ವಿಚಾರಣೆ ನಡೆಯಲಿದ್ದು ತನಿಖೆ ಕೊನೆಯ ಭಾಗವಾಗಿ ಸಾರ್ವಜನಿಕರು ಭಾಗಿಯಾಗಲಿದ್ದಾರೆ.
ಕಾಲ್ತುಳಿತ ಸಂಬಂಧ ಈವರೆಗೆ 140 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದ್ದು ಮುಂದಿನ ವಾರ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದೊಳಗೆ ಪ್ರವೇಶಿಸಿದ ಮೊದಲ ಭಾರತೀಯ ಶುಕ್ಲಾ..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಅಸಹ್ಯಕರ ತುಂಡುಡುಗೆ ತೊಟ್ಟು ಅರೆಬರೆ ಬಟ್ಟೆಯ ಬಗ್ಗೆಯೇ ಪ್ರಶ್ನೆ ಮಾಡುತ್ತಾ ಬೀದಿ ಸುತ್ತಿದ ಯುವತಿ..! ಇಲ್ಲಿದೆ ವೈರಲ್ ವಿಡಿಯೋ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget