Latestಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ಉಚಿತ ಯೋಜನೆಗಳು ಅಪಾಯಕಾರಿ, ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಎಂದ ಕಾಂಗ್ರೆಸ್ ಶಾಸಕ..! ಉಚಿತ ಯೋಜನೆಗಳ ಬಗ್ಗೆ ಸ್ವಪಕ್ಷೀಯರಿಂದಲೇ ಆಕ್ಷೇಪ..!

427

ನ್ಯೂಸ್‌ ನಾಟೌಟ್: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಟೀಕೆಗಳು ಸಹಜ. ಆದರೆ, ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್​​ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,

ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್​ವಿ ದೇಶಪಾಂಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಮಾನ್ಯ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಜೊತೆಯಲ್ಲಿ ಇಂದು(ಮಾ.29) ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ವೇಳೆ ಈ ಹೇಳಿಕೆ ನೀಡಿದ್ದಾರೆ.

 

View this post on Instagram

 

A post shared by News not out (@newsnotout)

See also  ವಿದ್ಯಾರ್ಥಿನಿಯರ ಹಾಸ್ಟೆಲ್‌ ನ ಬಾತ್‌ ರೂಮ್‌ ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ..? ವಿದ್ಯಾರ್ಥಿನಿಯರಿಗೆ ಬೆದರಿಕೆ ಕರೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget