ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಪ್ರಥಮ ಬಿ.ಎ.ಎಂ.ಎಸ್ ವಿದ್ಯಾರ್ಥಿಗಳ ಫ್ರೆಶರ್ಸ್ ಡೇ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ (ನ. 29) 2024 -25ನೇ ಸಾಲಿನ ಪ್ರಥಮ ಬಿ.ಎ. ಎಂ.ಎಸ್ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ವಿದ್ಯಾರ್ಥಿಗಳು ಓದಿನ ಜತೆ ತಮ್ಮಲ್ಲಿರುವ ಪ್ರತಿಭೆಗಳನ್ನು ಪ್ರದರ್ಶಿಸಲು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಮನೋರಂಜನೆಗಳನ್ನು ಪ್ರದರ್ಶಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾದರ್ ಡಿ.ವಿ., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತ ಎಂ., ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಕನಸ ಬಿತ್ತಿದಾತ

ಸುಳ್ಯ: ಎನ್ನೆಂಸಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಹಾಗೂ ಶಿಶ್ಯೋಪನಯನ