Latestರಾಜಕೀಯರಾಜ್ಯವಾಣಿಜ್ಯ

ಏ.1ರಿಂದ ಕರ್ನಾಟಕದಲ್ಲಿ ಟೋಲ್‌ ದರ ಶೇ.5ರಷ್ಟು ಏರಿಕೆ..! ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ದರ ಪರಿಷ್ಕರಣೆ..!

607
Spread the love

ನ್ಯೂಸ್‌ ನಾಟೌಟ್: ಏಪ್ರಿಲ್‌ 1ರಿಂದ ಹೊಸ ಟೋಲ್‌ ನೀತಿ ಜಾರಿಯಾಗಲಿದ್ದು, ಕರ್ನಾಟಕದಾದ್ಯಂತ ಟೋಲ್‌ ಶುಲ್ಕ ಶೇ.5ರಷ್ಟು ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಕನಿಷ್ಠ ಶೇ 3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ ಎಂದು ತಿಳಿದುಬಂದಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್​ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ.5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ.

ರಾಷ್ಟ್ರೀಯ ಹೆದ್ದಾರಿಗಳ ಮೇಲಿನ ಸುಂಕಗಳಿಗೆ ಕೇಂದ್ರ ಸರ್ಕಾರ ಶೀಘ್ರವೇ ಹೊಸ ನೀತಿ ಪ್ರಕಟಿಸಲಿದೆ. ಇದರಲ್ಲಿ ಗ್ರಾಹಕರಿಗೆ ಕೆಲವು ರಿಯಾಯಿತಿ ದೊರೆಯಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರೂ ಅದಿನ್ನೂ ಜಾರಿಯಾಗಿಲ್ಲ.

2008ರ ನೀತಿಯೇ ಅನ್ವಯವಾಗಲಿದೆ. ಟೋಲ್ ಗುತ್ತಿಗೆ ಅವಧಿಯನ್ನು ಆಧರಿಸಿ ದರಗಳು ಬದಲಾಗಲಿವೆ. ಈ ಹೆಚ್ಚುವರಿ ಶುಲ್ಕವನ್ನು ಗ್ರಾಹಕರಿಗೆ ವರ್ಗಾಯಿಸಲಾಗುವುದು ಎಂದು ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಹೇಳಿರುವಂತೆ, ಗರಿಷ್ಠ ಶೇ.5 ಮತ್ತು ಕನಿಷ್ಠ ಶೇ.3 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಬೆಂಗಳೂರು-ಮೈಸೂರು ಮಾರ್ಗದ ಕನಮಿಣಿಕೆ ಮತ್ತು ಶೇಷಗಿರಿಹಳ್ಳಿ, ಬೆಂಗಳೂರು-ತಿರುಪತಿ ಮಾರ್ಗದ ನಂಗ್ಲಿ, ಬೆಂಗಳೂರು-ಹೈದರಾಬಾದ್ ಮಾರ್ಗದ ಬಾಗೇಪಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯ ಸಾದಹಳ್ಳಿ, ಮತ್ತು ಹುಲಿಕುಂಟೆ ಹಾಗೂ ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಟೋಲ್ ಪ್ಲಾಜಾಗಳಲ್ಲಿ ದರಗಳು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿಬಾಡಿಗೆ ಮನೆ ಮಾಲಕಿ ಜೊತೆ ಅಕ್ರಮ ಸಂಬಂಧ..! ಬಾಡಿಗೆದಾರನನ್ನ ಜೀವಂತವಾಗಿ ಹೂತುಹಾಕಿದ ಆಕೆಯ ಪತಿ..!

See also  ಸಿಎಂ ಸಚಿವಾಲಯದಲ್ಲಿನ 30 ಸಿಬ್ಬಂದಿಯನ್ನು ವಜಾ ಮಾಡಿದ ಸರ್ಕಾರ..! ಸಿಎಂ ಸಚಿವಾಲಯದಿಂದ ಆದೇಶ..!
  Ad Widget   Ad Widget   Ad Widget   Ad Widget   Ad Widget   Ad Widget