ಕ್ರೈಂಬೆಂಗಳೂರು

ಬೆಂಗಳೂರಿನಲ್ಲಿ ಹೆಚ್ಚುವರಿ 2500 ಸಿಸಿ ಕ್ಯಾಮೆರಾ ಅಳವಡಿಸುತ್ತಿರುವುದೇಕೆ..? ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

ನ್ಯೂಸ್ ನಾಟೌಟ್ : ಬೆಂಗಳೂರಿನಲ್ಲಿ ಅಪರಾಧ ಕೃತ್ಯಗಳ ನಿಯಂತ್ರಣಕ್ಕಾಗಿ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಹೆಚ್ಚುವರಿ 2500 ಸಾವಿರ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರ(ಡಿ.೧೪) ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ, ಈಗಾಗಲೇ ಬೆಂಗಳೂರು ವ್ಯಾಪ್ತಿಯಲ್ಲಿ 7,500 ಸಾವಿರ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಜತೆಗೆ ಕಮಾಂಡರ್ ಸೆಂಟರ್ ನಲ್ಲಿ ಇದರ ಕಾರ್ಯಾಚರಣೆಯನ್ನು ವೀಕ್ಷಣೆ ಮಾಡಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ 2,500 ಸಾವಿರ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಿಸಿ ಕ್ಯಾಮೆರಾಗಳು ಹೆಚ್ಚು ಗುಣಮಟ್ಟದಿಂದ ಕೂಡಿದ್ದು, ಹೆಚ್ಚಿನ ಪ್ರಮಾಣದಲ್ಲಿ ಕ್ಯಾಮೆರಾಗಳನ್ನು ವಾಣಿಜ್ಯ ಕಟ್ಟಡ, ಪ್ರದೇಶ, ಶಾಲಾ ಕಾಲೇಜು, ಸರಕಾರಿ ಕಟ್ಟಡ, ಬಸ್ ನಿಲ್ದಾಣಗಳಲ್ಲಿ ಅಳವಡಿಸಿ ವಿಶೇಷ ನಿಗಾ ಇರಿಸಲಾಗುತ್ತದೆ ಎಂದಿದ್ದಾರೆ.

Related posts

ದುಗ್ಗಲಡ್ಕ: 32 ವರ್ಷದ ಯುವಕ ಹಠಾತ್ ನಾಪತ್ತೆ, ಮನೆಯವರಿಂದ ತೀವ್ರ ಹುಡುಕಾಟ

ಉಪ್ಪಿನಂಗಡಿ: ಸರ್ಕಾರಿ ಜಮೀನಿನಲ್ಲಿ ಕಟ್ಟಿದ್ದ ಮನೆಯನ್ನು ಕೆಡವಿದ ಕಂದಾಯ ಅಧಿಕಾರಿಗಳು..! ಚಿತ್ರದುರ್ಗದಿಂದ ಬಂದು ನೆಲೆಸಿದ್ದ ವೃದ್ಧ ದಂಪತಿ

ಮೊಬೈಲ್ ಕೊಡಿಸುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ..! ಅಂದು ಸ್ನೇಹಿತರಿಂದಲೇ ನಡೆದಿತ್ತು ಮನಕಲಕುವ ಕೃತ್ಯ!