ಕ್ರೈಂ

ದೀಪಾವಳಿ ಹಬ್ಬದಂದೇ ಶಾಕ್‌: 4 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

923

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ದಿನದಂದೇ ರಾಜ್ಯದ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಒಂದೇ ಮನೆಯಲ್ಲಿ ಮೂವರು ಸಾವಿಗೆ ಶರಣಾದ ಘಟನೆ ಬುಧವಾರ ನಡೆದಿದೆ.

ಗ್ರಾಮದ ಮಲ್ಲಪ್ಪ ಗೋವಿಂದಪ್ಪ ಗಡಾದ್ (26), ಸುಧಾ ಮಲ್ಲಪ್ಪ ಗಡಾದ್ (22) ಹಾಗೂ 4 ತಿಂಗಳ ಮಗು ಮೃತರು. ಗ್ರಾಮದ ತಮ್ಮ ಜಮೀನಿನಲ್ಲಿರುವ ಮನೆ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದು ಮಲ್ಲಪ್ಪ ಗಡಾದ್ ಕುತ್ತಿಗೆಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿದ್ದು, ಪತ್ನಿ ಹಾಗೂ ಮಗು ಶವ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದ ಗಜೇಂದ್ರಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದು, ಪೊಲೀಸ್ ತನಿಖೆಯಿಂದಲೇ ಘಟನೆ ವಿವರ ಹೊರಬರಬೇಕಿದೆ. ಸದ್ಯಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣವಿರಬಹುದು ಎಂದು ಹೇಳಲಾಗಿದೆ.

See also  ಅರಂತೋಡು: ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು..!
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget