ಸುಳ್ಯ

ಡಿ.1ರಂದು ಅರೆಭಾಷೆ ಗಡಿನಾಡ ಉತ್ಸವ-2024, ಹಲವಾರು ಗಣ್ಯರು ಕಾರ್ಯಕ್ರಮಕ್ಕೆ ಆಗಮನ

ನ್ಯೂಸ್ ನಾಟೌಟ್: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಗ್ರಾಮ ಗೌಡ ಸಮಿತಿ ಮಂಡೆಕೋಲು ಗ್ರಾಮದ ಸಹಕಾರದೊಂದಿಗೆ ಡಿ.1ರಂದು ಆದಿತ್ಯವಾರ ಬೆಳಗ್ಗೆ 9ರಿಂದ ಮಂಡೆಕೋಲಿನ ಅಮೃತ ಸಭಾಭವನದಲ್ಲಿ ಅರೆಭಾಷೆ ಗಡಿನಾಡ ಉತ್ಸವ -2024 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇದರ ಅಧ್ಯಕ್ಷ ಸದಾನಂದ ಮಾವಜಿ ವಹಿಸಲಿದ್ದಾರೆ. ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ಇದರ ಪೂರ್ವಾಧ್ಯಕ್ಷ ಜಾಕೆ ಸದಾನಂದ ಉದ್ಘಾಟನೆ ನಡೆಸಲಿದ್ದಾರೆ. ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ ಸೇರಿದಂತೆ ಹಲವಾರು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಲಿದೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ , ಮಾಜಿ ಸಿಎಂ ಡಿ.ವಿ ಸದಾನಂದ ಗೌಡ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕಿ ಭಾಗೀರಥಿ ಮುರುಳ್ಯ, ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವಾರು ಗಣ್ಯರು ಆಗಮಿಸಲಿದ್ದಾರೆ.

Related posts

ಮಡಿಕೇರಿ : ಫೆ. 25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಭಯೋತ್ಪಾದಕರಿಗೆ ಹಣ ನೀಡಿದವರೇ ಪ್ರವೀಣ್ ಹತ್ಯೆಗೂ ನೆರವು ನೀಡಿದ್ದರು..!

ಸುಳ್ಯ :’ಶ್ರೀ ಕೃಷ್ಣ ಜನ್ಮಾಷ್ಟಮಿ’ ಸಂಭ್ರಮಕ್ಕೆ ದಿನಗಣನೆ,”ಸುಳ್ಯ ಮೊಸರು ಕುಡಿಕೆ ಉತ್ಸವ 2023″ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ