ಸುಳ್ಯ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಾಂಧಿ ಜಯಂತಿ, ಸ್ವಚ್ಛತಾ ಕಾರ್ಯ, ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪನಮನ

29
Spread the love

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂಎಂ ಗಾಂಧೀಜಿಯ ತತ್ವಗಳನ್ನು ಸ್ಮರಿಸುವುದರೊಂದಿಗೆ ವಿಶೇಷ ನುಡಿನಮನ ಸಲ್ಲಿಸಿದರು.

ಬಳಿಕ ಕಾಲೇಜಿನ ಉಪನ್ಯಾಸಕ ಸಂಜೀವ ಕುದ್ಪಾಜೆ ಗಾಂಧೀಜಿಯ ಜೀವನ ಚರಿತ್ರೆ ಕುರಿತ ಸ್ವರಚಿತ ಕವನ ವಾಚಿಸಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಸಭಾಕಾರ್ಯಕ್ರಮದ ಬಳಿಕ ಸಚ್ಛತಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು. ಡಾ. ಎನ್ ಎ ಜ್ನಾನೇಶ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.

See also  ಗಾಢನಿದ್ದೆಯಲ್ಲಿದ್ದಾಗಲೇ ಮೈ ಮೇಲೆ ಬಿದ್ದ ಬೆಡ್, 2 ವರ್ಷ ಪ್ರಾಯದ ಪುಟ್ಟ ಬಾಲಕ ದುರಂತ ಅಂತ್ಯ
  Ad Widget   Ad Widget   Ad Widget