ನ್ಯೂಸ್ ನಾಟೌಟ್: ಸುಳ್ಯದಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮದ ಯಶಸ್ಸಿನ ಹಿನ್ನೆಲೆಯಲ್ಲಿ ಜನಜಾಗೃತಿ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಗೌರವಾರ್ಪಣೆ ಮಾಡಿದರು.
ಅಖಿಲ ಕರ್ನಾಟಕ ಜನಜಾಗೃತಿ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಎನ್. ಎ. ರಾಮಚಂದ್ರ, ತಾಲೂಕು ಅಧ್ಯಕ್ಷ ಲೋಕನಾಥ್ ಅಮೆಚೂರು, ತಾಲೂಕು ನಿಕಟಪೂರ್ವಾಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ, ಪ್ರಗತಿಬಂಧು ಸ್ವಸಹಾಯ ಸಂಘಗಳ ತಾಲೂಕು ಅಧ್ಯಕ್ಷ ಸುರೇಶ್ ಕಣೆಮರಡ್ಕ, ಪೂರ್ವಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಮದ್ಯವರ್ಜನ ಸಮಿತಿಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ, ತಾಲೂಕು ಯೋಜನಾಧಿಕಾರಿ ನಾಗೇಶ್ ಪಿ, ವಲಯ ಮೇಲ್ವಿಚಾರಕಿ ಶ್ರೀಮತಿ ವಿಶಾಲ ಕೆ, ಮದ್ಯವರ್ಜನ ಸಮಿತಿ ಉಪಾಧ್ಯಕ್ಷೆ ಶಶ್ಮಿ ಭಟ್ ಉಪಸ್ಥಿತರಿದ್ದರು.