Uncategorized

ಗಾಂಧಿ ಪ್ರತಿಮೆ, ವಿಷ್ಣು ದೇವಾಲಯದ ಪ್ರತಿಮೆ ಭಗ್ನ

ಒಟ್ಟೋವಾ: ಮಹಾತ್ಮ ಗಾಂಧಿ ಪ್ರತಿಮೆಯ ಮೇಲೆ ದುಷ್ಕರ್ಮಿಗಳು ಕೆಟ್ಟದಾಗಿ ಬರೆದು, ವಿಷ್ಣು ದೇವಾಲಯದ ಕೆಲವು ಪ್ರತಿಮೆಗಳನ್ನು ವಿರೂಪಗೊಳಿಸಿದ ಘಟನೆ ಕೆನಡಾದ ಒಂಟಾರಿಯೊದ ರಿಚ್ಮಂಡ್ ಹಿಲ್ ನಗರದಲ್ಲಿ ನಡೆದಿದೆ.

ಕೆನಡಾದಲ್ಲಿರುವ ಯೋಂಗ್ ಸ್ಟ್ರೀಟ್ ಮತ್ತು ಗಾರ್ಡನ್ ಅವೆನ್ಯೂ ಪ್ರದೇಶದಲ್ಲಿನ ವಿಷ್ಣು ಮಂದಿರದಲ್ಲಿ ಪ್ರತಿಮೆಗಳನ್ನು ದ್ವಂಸಗೊಳಿಸಲಾಗಿದೆ. ಅದರ ಜೊತೆಗೆ ಮಹಾತ್ಮ ಗಾಂಧಿ ಪ್ರತಿಮೆಯ ಕೆಳಗೆ ಅವಾಚ್ಯ ಶಬ್ದವನ್ನು ಬಳಸಿ ಹಾನಿಗೊಳಿಸಿದ್ದಾರೆ. ಈ ಬಗ್ಗೆ ಭಾರತವು ತೀವ್ರ ದುಃಖ ವ್ಯಕ್ತಪಡಿಸಿದ್ದು, ಈ ಕೃತ್ಯವೆಸಗಿದವರ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿದೆ. ಇದನ್ನು ದ್ವೇಷದ ಕೃತ್ಯ ಎಂದು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬಜರಂಗದಳ ಅಪಾಯಕಾರಿ ಸಂಘಟನೆ: ಫೇಸ್ ಬುಕ್ ಆಂತರಿಕ ವರದಿ

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಕರೋನ ಭೀತಿ; ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ: ಸಿಎಂ ಬೊಮ್ಮಾಯಿ