ನ್ಯೂಸ್ ನಾಟೌಟ್:ಕನ್ನಡ ಚಿತ್ರರಂಗದ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬೋ ‘Yours Sincerely Raamʼಗಾಗಿ ಒಂದಾಗಿರುವುದು ಗೊತ್ತೇ ಇದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಗಣೇಶ್ ಹುಟ್ಟುಹಬ್ಬಕ್ಕೆ ಚಿತ್ರತಂಡ ವಿಶೇಷವಾಗಿ ಶುಭ ಕೋರಿದೆ. ‘ ಗಣೇಶ್ ಜನ್ಮದಿನದಂದು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಹೌದು, ಬರ್ತ್ ಡೇ ದಿನ ಅನಾವರಣಗೊಂಡಿರುವ ಈ ಪೋಸ್ಟರ್ ಬಹಳ ವಿಶೇಷವಾಗಿದೆ. ಗಣೇಶ್ ಹಿಂದೆಂದೂ ಕಾಣದ ಗೆಟಪ್ ನಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಜರಂಗಿ ಅವತಾರದಲ್ಲಿ ಮಳೆ ಹುಡ್ಗ ದರ್ಶನ ಕೊಟ್ಟಿದ್ದಾರೆ. ಹಿಮಾಲಯದ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ರಾಮ ಸೈಕಲ್ ಮೇಲೆ ಕುಳಿತಿದ್ದು, ಭಜರಂಗಿ ಭುಜದಲ್ಲಿ ಪೋಸ್ಟ್ ಮ್ಯಾನ್ ಬ್ಯಾಗ್ ಕಾಣಿಸುತ್ತದೆ. ಪೋಸ್ಟರ್ ನಾನಾ ಕುತೂಹಲ ಹುಟ್ಟುಹಾಕುವ ಕ್ರಿಯೇಟ್ ಮಾಡುವುದರ ಜೊತೆಗೆ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇನ್ನು ಚಿತ್ರ ಯಾವ ರೀತಿ ಇರಲಿದೆ ಅನ್ನೋದಕ್ಕೆ ಉತ್ತರ ಸದ್ಯದಲ್ಲೇ ಸಿಗಲಿದೆ.
ʻಪುಷ್ಪಕ ವಿಮಾನ’, ʻಇನ್ಸ್ಪೆಕ್ಟರ್ ವಿಕ್ರಮ್ʼ, ʻಮಾನ್ಸೂನ್ ರಾಗʼದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಸಿನಿಮಾ ಹಸಿವಿರುವ ವಿಖ್ಯಾತ್ ಎ ಆರ್ ಈ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ