Uncategorized

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ, ಏನಿದು ಷರತ್ತು? ಈ ಸ್ಟೋರಿ ನೋಡಿ

ಬೆಂಗಳೂರು: ಹಲವು ಒತ್ತಡಗಳ ನಡುವೆಯೇ ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ. ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌. ಅಶೋಕ್ ಅವರು, ʼಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್ ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗುವುದು ಎಂದು ಹೇಳಿದರು.

Related posts

ಶಾಲೆ ಬಿಟ್ಟು ಬೀಡಿ ಕಟ್ಟುತ್ತಿದ್ದ ಕೇರಳದ ವ್ಯಕ್ತಿ ಈಗ ಅಮೆರಿಕದಲ್ಲಿ ನ್ಯಾಯಾಧೀಶ

ಮೋದಿ ಕಾರ್ಯಕ್ರಮದ ಮರುದಿನವೇ ಹಿಂದೂ ಕಾರ್ಯಕರ್ತ ಆತ್ಮಹತ್ಯೆ

ಸೋನು ಗೌಡ ದತ್ತು ಪಡೆದ ಮಗುವಿನ ಹಿನ್ನೆಲೆಯೇನು ಗೊತ್ತಾ..? ವಿಚಾರಣೆ ವೇಳೆ ಹೊರಬಂತು ಸತ್ಯ!!ನಿಮ್ಗೂ ಶಾಕ್ ಆಗುತ್ತೆ..