ಕರಾವಳಿಕ್ರೈಂವೈರಲ್ ನ್ಯೂಸ್

ಗಣೇಶ ಮೆರವಣಿಗೆ ವೇಳೆ ಮಸೀದಿ ಬಾಗಿಲಿಗೆ ಮಂಗಳಾರತಿ ಮಾಡಿದ್ದೇಕೆ..? ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದೇಕೆ? ಅಷ್ಟಕ್ಕೂ ಅಲ್ಲಿ ಏನು ನಡೆಯಿತು?

ನ್ಯೂಸ್ ನಾಟೌಟ್: ಗಂಗಾವತಿ ಪಟ್ಟಣದಲ್ಲಿ ಹಿಂದೂ ಮಹಾಮಂಡಳಿಯ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಜಾಮಿಯಾ ಮಸೀದಿ ಬಾಗಿಲಿಗೆ ಆರತಿ ಬೆಳಗಿ, ಜೈಶ್ರೀರಾಮ್ ಘೋಷಣೆ ಕೂಗಿದ ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಸೆ. 28ರಂದು ಗಣಪತಿ ವಿಸರ್ಜನೆ ಮೆರವಣಿಗೆ ಇಲ್ಲಿನ ಜಾಮಿಯಾ ಮಸೀದಿ ಬಳಿ ಬರುತ್ತಿದ್ದಂತೆಯೇ ಮಸೀದಿ ಬಾಗಿಲಿಗೆ ಆರತಿ ಬೆಳಗಿದ್ದಾರೆ. ಗಲಭೆ ಮಾಡುವ ಉದ್ದೇಶದಿಂದ ಜೈಶ್ರೀರಾಮ್, ಭಾರತ ಮಾತಾಕೀ ಜೈ, ಗವಿ ಗಂಗಾಧರೇಶ್ವರ ಮಹಾರಾಜ ಕೀ ಜೈ ಎನ್ನುವ ಘೋಷಣೆಗಳನ್ನು ಕೂಗಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಯಮನೂರ ರಾಠೋಡ್, ಶ್ರೀಕಾಂತ ಹೊಸಕೇರಿ, ಕುಮಾರ ಹೂಗಾರ, ಚೆನ್ನಬಸವ ಹೂಗಾರ ಹಾಗೂ ಸಂಗಮೇಶ ಅಯೋಧ್ಯ ವಿರುದ್ಧ ಗಂಗಾವತಿ ನಗರ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ.

Related posts

ದಸರಾ ಆನೆ ಬಲರಾಮನಿಗೆ ಗುಂಡು ಹೊಡೆದ ಪಾಪಿ..!

ಸೋಮವಾರಪೇಟೆ: ಯುವತಿ ಮೇಲೆ ಮೂವರಿಂದ ಅತ್ಯಾಚಾರ ಯತ್ನ

IND vs PAK world cup 2023: ನಾಳಿನ ಭಾರತ -ಪಾಕಿಸ್ಥಾನ ಹೈವೋಲ್ಟೆಜ್ ಪಂದ್ಯಕ್ಕೆ 4 ಐಜಿ, 21 ಡಿಸಿಪಿ, 7 ಸಾವಿರ ಪೊಲೀಸ್ ನಿಯೋಜನೆ, ನರೇಂದ್ರ ಮೋದಿ ಸ್ಟೇಡಿಯಂಗೆ ಇಷ್ಟೊಂದು ಬಿಗಿ ಭದ್ರತೆ ಏಕೆ..?