ಕ್ರೈಂರಾಜ್ಯವೈರಲ್ ನ್ಯೂಸ್

ಹೆದ್ದಾರಿ ಸಮೀಪ ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ..! ಸಾವಿನ ಹಿಂದಿದೆಯಾ ನಿಗೂಢ ಕಾರಣ..?

32
Spread the love

ನ್ಯೂಸ್ ನಾಟೌಟ್: ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹವು ಪತ್ತೆಯಾಗಿದ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿಯ ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರ ಪಕ್ಕದಲ್ಲಿ ಘಟನೆ ನಡೆದಿದೆ.

ಸುಮಾರು 25 ವರ್ಷದ ಯುವತಿಯನ್ನು ಕೊಲೆ ಮಾಡಿ ಬಳಿಕ ಗುರುತು ಸಿಗಬಾರೆಂದು ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಅರ್ಧಂಬರ್ಧ‌ ಸುಟ್ಟಿರುವ ಯುವತಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಯುವತಿ ಮುಖವು ಸಂಪೂರ್ಣ ಸುಟ್ಟು ಹೋಗಿದ್ದು, ಗುರುತು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸದ್ಯ ಚೇಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ವರದಿ ತಿಳಿಸಿದೆ.

See also  ಮಗಳು ಲೈಂಗಿಕ ದಂಧೆಯಲ್ಲಿದ್ದಾಳೆ ಎಂದು ತಾಯಿಗೆ ಸುಳ್ಳು ಕರೆ..! ಆಘಾತಗೊಂಡು ಸರ್ಕಾರಿ ಶಾಲಾ ಶಿಕ್ಷಕಿ ಸಾವು..!
  Ad Widget   Ad Widget   Ad Widget