Uncategorized

ಗೋಕಾಕ್‌ನಲ್ಲೂ ಸಾಮೂಹಿಕ ಅತ್ಯಾಚಾರ: ಅಪ್ರಾಪ್ತೆ ಕುಟುಂಬಕ್ಕೆ ಬೆದರಿಕೆ

ಘಟಪ್ರಭಾ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಷ್ಟ್ರಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೂ ಸಾಮೂಹಿಕ ಅತ್ಯಾಚಾರ ನಡೆದಿದ್ದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ? 

ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 40 ದಿನದ ಹಿಂದೆ ಜಮೀನಿಗೆ ಹೋಗಿದ್ದ 15 ವರ್ಷದ ಬಾಲಕಿಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು. ಬಳಿಕ ದೂರು ದಾಖಲಿಸದಂತೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬದ ಮೇಲೆ ಒತ್ತಡ ಹೇರಿದ್ದರು. ಆದರೂ ಸಂತ್ರಸ್ತೆ ದೂರು ದಾಖಲಿಸಿದ್ದಳು. ದೂರು ದಾಖಲಾದ ಅರ್ಧ ದಿನದಲ್ಲೇ ಪೊಲೀಸರು ವಿಶೇಷ ತಂಡ ರಚಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.  ಬಾಲಕಿ ಅಪ್ರಾಪ್ತೆಯಾಗಿರುವುದರಿಂದ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Related posts

ಆನ್‌ಲೈನ್‌ ಕ್ಲಾಸ್‌ಗಾಗಿ ಮರ ಏರಿದ ವಿದ್ಯಾರ್ಥಿ ಕೆಳಕ್ಕೆ ಬಿದ್ದು ಗಂಭೀರ

ಪುನೀತ್ ಸ್ಥಿತಿ ತೀರ ಗಂಭೀರ, ಏನೂ ಹೇಳಲಾಗದು: ಆಸ್ಪತ್ರೆ ವೈದ್ಯರ ಹೇಳಿಕೆ

ಹಿಂದೂ ದೇಗುಲಕ್ಕೆ ಭೂಮಿ ದಾನ ಮಾಡಿದ ಮುಸ್ಲಿಂ ವ್ಯಕ್ತಿ