ನ್ಯೂಸ್ ನಾಟೌಟ್: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಫ್ಲಾಟ್ ಮೇಲೂ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 2.67 ಕೋಟಿ ಹಣವನ್ನು DRI ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ನಂದವಾಣಿ ಮ್ಯಾನ್ಸನ್ ನಲ್ಲಿ ನಟಿ ವಾಸವಿದ್ದರು. ತಿಂಗಳಿಗೆ 4.5 ಲಕ್ಷ ಬಾಡಿಗೆ ಕಟ್ಟುತ್ತಿದ್ದರು ಎನ್ನಲಾಗಿದೆ. ನಿನ್ನೆ ವಿಮಾನನಿಲ್ದಾಣದಲ್ಲಿ ನಟಿಯನ್ನು ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಲಾಗಿತ್ತು.