ಕರಾವಳಿಪುತ್ತೂರು

ಗೋಳಿತ್ತೂಟ್ಟು:ಕಾರು ಮತ್ತು ಬೈಕ್ ಮಧ್ಯೆ ಅಪಘಾತ,ಬೈಕ್ ಸವಾರ ಗಂಭೀರ

267

ನ್ಯೂಸ್ ನಾಟೌಟ್ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕುಡಾಲ ಸಮೀಪದ ರಸ್ತೆಯಲ್ಲಿ ಬೈಕ್ ಮತ್ತು ಕಾರ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು,ಕಾರ್ ಕೂಡ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗಿನ ಜಾವ ಈ ದುರಂತ ಸಂಭವಿಸಿದ್ದು,ಘಟನಾ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದರು.ಗಾಯಾಳುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.ಕಾರು ಚಾಲಕ ಹಾಗೂ ಬೈಕ್ ಸವಾರ ಇಬ್ಬರೂ ಕೆಲಸದ ನಿಮಿತ್ತ ಹೊರಟಿದ್ದರು ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಶವಗಳು ಪತ್ತೆ..! ಆ ಗ್ರಾಮದ 400 ಮನೆಗಳಲ್ಲಿ ಉಳಿದದ್ದು ಕೇವಲ 30 ಮನೆಗಳು..! ಇಲ್ಲಿದೆ ಕೆಲ ವಿಡಿಯೋಗಳು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget