ಕರಾವಳಿಶಿಕ್ಷಣ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ನ್ಯೂಸ್ ನಾಟೌಟ್: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಲಾಗಿದ್ದು, ಮಾಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಒಂದು ಅಂಕ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

2023ರ ಮಾರ್ಚ್‌ನಲ್ಲಿ ನಡೆಯುವ ವಾರ್ಷಿಕ ಪರೀಕ್ಷೆಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ. ಆದರೆ ಇದೀಗ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ತಂದಿದೆ. ಈ ನಿಟ್ಟಿನಲ್ಲಿಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯಮಟ್ಟದ ಪಬ್ಲಿಕ್‌ ಪರೀಕ್ಷೆ ನಿಯಮಗಳು-1997ಕ್ಕೆ ತಿದ್ದುಪಡಿ ತರಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Related posts

ಸುಳ್ಯ:ಸೌಜನ್ಯ ಪರ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದ ನಗರ ಪಂಚಾಯತ್,ಮತ್ತದೇ ಸ್ಥಳದಲ್ಲಿ ಬ್ಯಾನರ್ ಅಳವಡಿಸಿದ ಸಂಘಟಕರು..!

ಸುಳ್ಯಕ್ಕೆ ವಲಯಾರಣ್ಯಾಧಿಕಾರಿಯಾಗಿ ಮಂಜುನಾಥ್ ನೇಮಕ! ಸುಳ್ಯ, ಪಂಜ ರೇಂಜರ್ ಗಳ ವರ್ಗಾವಣೆ !

ಸಂಪಾಜೆಯಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಒಟ್ಟಾಗಿ ಬಂದು ರಕ್ತದಾನ..! , ಭಾವೈಕ್ಯದ ಸಂದೇಶ ಸಾರಿದ್ದಕ್ಕೆ ಜನಮೆಚ್ಚುಗೆ